ಕಾಲೇಜುಗಳ ಆರಂಭ:  ಎಸ್‌ಒಪಿ ಬಿಡುಗಡೆ

ಪದವಿ, ಎಂಜಿನಿಯರಿAಗ್ ಹಾಗೂ ಡಿಪ್ಲೊಮಾ ಕಾಲೇಜುಗಳನ್ನು 17ರಿಂದ ಆರಂಭಿಸುವ ಸರ್ಕಾರದ ನಿರ್ಧಾರದ ಹಿನ್ನೆಲೆಯಲ್ಲಿ  ಪ್ರಮಾಣಿತ ಕಾರ್ಯಾಚರಣೆ ವಿಧಾನ(ಎಸ್‌ಒಪಿ)ವನ್ನು ಉನ್ನತ ಶಿಕ್ಷಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಗೂ ಪ್ರಥಮ/ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ನಿಗದಿತ ಸೂಚನೆ ನೀಡಲಾಗಿದೆ. ಸ್ನಾತಕೋತ್ತರ, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು 17ರಿಂದ ಪ್ರಾರಂಭಿಸಬೇಕು. ಈ ತರಗತಿಗಳಿಗೆ ಹಾಜರಾಗಲು ಇಚ್ಛಿಸುವ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪತ್ರ ಪಡೆಯಬೇಕು. ಬೋಧನೆ, ಪ್ರಯೋಗಾಲಯ ಮತ್ತು ಪ್ರಾಜೆಕ್ಟ್ ತರಗತಿಗಳನ್ನು ಪಾಳಿ ವ್ಯವಸ್ಥೆಯಂತೆ ಮಾಡಬಹುದು. ತರಗತಿಗಳಿಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸಬೇಕು. ಇಂಥ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರಬಹುದಾದ  ಅನುಮಾನಗಳನ್ನು ನಿವಾರಿಸಲು ಭೌತಿಕ ಸಂಪರ್ಕ ತರಗತಿಗಳನ್ನು ನಡೆಸಬೇಕು ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿವರಿಸಿದರು. ಕಾಲೇಜು ಕಟ್ಟಡ, ಮುಖ್ಯದ್ವಾರ, ಶೌಚಾಲಯ ಹಾಗೂ ಕೊಠಡಿಗಳ ಪೀಠೋಪಕರಣ ಮತ್ತು ಪಠ್ಯ ಸಾಮಗ್ರಿಗಳನ್ನು ಸ್ಯಾನಿಟೈಸ್ ಮಾಡಬೇಕು. ಬೋಧಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಮೂರು ದಿನ ಮೊದಲು ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು, ವರದಿ ನೆಗೆಟಿವ್ ಬಂದಲ್ಲಿ ಮಾತ್ರ ಕಾಲೇಜಿಗೆ ಬರಬೇಕು. ವಿದ್ಯಾರ್ಥಿಗಳು ಮನೆಯಿಂದಲೇ ಊಟ ಮತ್ತು ಕುಡಿಯುವ ನೀರು ತರಬೇಕು. ಉಪನ್ಯಾಸಕರು ಮಾಸ್ಕ್ ಮತ್ತು ಫೇಸ್‌ಶೀಲ್ಡ್ ಧರಿಸಬೇಕು. ಗ್ರಂಥಾಲಯ ಮತ್ತು ಕ್ಯಾಂಟೀನ್ ತೆರೆಯಕೂಡದು. ಸಾಂಸ್ಕೃತಿಕ ಕಾರ್ಯಕ್ರಮ, ಎನ್‌ಸಿಸಿ ಹಾಗೂ ಎನ್ನೆಸ್ಸೆಸ್ ಚಟುವಟಿಕೆ ಪ್ರಾರಂಭಿಸುವಂತೆ ತಿಲ್ಲ ಎಂದು ಎಸ್‌ಒಪಿ ಸೂಚಿಸಿದೆ.

Journalist,Translator,avid bibliophile

Leave a Reply

Your email address will not be published. Required fields are marked *

Back To Top