ಕೃಷಿ ಚಟುವಟಿಕೆಗಳಿಗೆ ಪಡೆದ ಸಾಲದ ಆರು ತಿಂಗಳ ಅವಧಿಯ ಚಕ್ರಬಡ್ಡಿ ಮನ್ನಾ ಆಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ. ಕ್ರೆಡಿಟ್ ಕಾರ್ಡ್ ಮೂಲಕ ಪಡೆದ ಸಾಲ ಫೆಬ್ರವರಿ 29ರಂದು ಎಷ್ಟು ಇತ್ತೋ ಅಷ್ಟಕ್ಕೆ ಮಾತ್ರ ಚಕ್ರಬಡ್ಡಿ ಮನ್ನಾ ಸೌಲಭ್ಯ ಸಿಗಲಿದೆ. ಇಎಂಐಗಳಿಗೆ ವಿಧಿಸುವ ಬಡ್ಡಿ ದರವನ್ನು ಆಧರಿಸಿ ಚಕ್ರಬಡ್ಡಿಯ ಮೊತ್ತ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದೆ. ಬೆಳೆ ಸಾಲ, ಟ್ರಾö್ಯಕ್ಟರ್ ಖರೀದಿಗೆ ಪಡೆದ ಸಾಲವನ್ನು ಕೃಷಿ ಚಟುವಟಿಕೆಗಳಿಗೆ ಪಡೆದ ಸಾಲ ಎಂದು ಪರಿಗಣಿಸಲಾಗುತ್ತದೆ. ಇಂಥ ಸಾಲಗಳಿಗೆ ಚಕ್ರಬಡ್ಡಿ ಮನ್ನಾ ಸೌಲಭ್ಯ ನೀಡುವುದಿಲ್ಲ. ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆ (ಎಂಎಸ್ಎAಇ)ಗಳ ಸಾಲ, ಶಿಕ್ಷಣ, ಗೃಹ, ಗ್ರಾಹಕ ಬಳಕೆ ವಸ್ತುಗಳ ಖರೀದಿಗೆ ಪಡೆದ ಸಾಲ, ಕ್ರೆಡಿಟ್ ಕಾರ್ಡ್ ಸಾಲ, ವಾಹನ ಸಾಲ, ವೈಯಕ್ತಿಕ ಸಾಲಗಳಿಗೆ ಚಕ್ರಬಡ್ಡಿ ಮನ್ನಾ ಸೌಲಭ್ಯ ಸಿಗಲಿದೆ. ೨ ಕೋಟಿ ರೂ.ವರೆಗಿನ ಇಂತಹ ಸಾಲಗಳ ಆರು ತಿಂಗಳ ಅವಧಿಯ ಚಕ್ರಬಡ್ಡಿಯನ್ನು ಮನ್ನಾ ಮಾಡುವ ಪ್ರಕ್ರಿಯೆಯನ್ನು ನವೆಂಬರ್ ೫ರೊಳಗೆ ಪೂರ್ಣಗೊಳಿಸಬೇಕು ಎಂದು ಬ್ಯಾಂಕ್ಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ (ಎನ್ಬಿಎಫ್ಸಿ) ಆರ್ಬಿಐ ಈಗಾಗಲೇ ಸೂಚನೆ ನೀಡಿದೆ.