ಹೆಚ್ಚುವರಿ ಸಂಪನ್ಮೂಲ ಸಂಗ್ರಹ ಹೆಚ್ಚಿಸಲು ಕೈಗಾರಿಕಾ ಭೂಮಿಯ ನೋಂದಣಿ ಶುಲ್ಕ ಮತ್ತು 20 ಲಕ್ಷ ರೂ.ಗೂ ಕಡಿಮೆ ಮೌಲ್ಯದ ಫ್ಲ್ಯಾಟ್‌ಗಳ ನೋಂದಣಿ ಶುಲ್ಕವನ್ನು ಶೇ.೨ ರಷ್ಟು ಇಳಿಕೆ ಮಾಡಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿ, ಕೈಗಾರಿಕಾ ಉದ್ದೇಶದ ಭೂಮಿ ನೋಂದಣಿ ಶುಲ್ಕವನ್ನು ಶೇ.5 ರಿಂದ ಶೇ.೩ಕ್ಕೆ, 20 ಲಕ್ಷ ರೂ.ಗಿಂತ ಕಡಿಮೆ ಮೌಲ್ಯದ ಫ್ಲ್ಯಾಟ್‌ಗಳ ನೋಂದಣಿ ಶುಲ್ಕವನ್ನೂ ಶೇ.3 ಕ್ಕೆ ಇಳಿಸಲಾಗುತ್ತದೆ. ಇದರಿಂದ ನೋಂದಣಿ ಹೆಚ್ಚಾಗುತ್ತದೆ. ಇದರಿಂದ ಉದ್ಯಮಿಗಳ ಆರ್ಥಿಕ ಹೊರೆ ಮತ್ತು ಕಡಿಮೆ ಬೆಲೆಯ ಫ್ಲ್ಯಾಟ್‌ಗಳನ್ನು ಖರೀದಿಸುವವರಿಗೆ ಉತ್ತೇಜನ ಸಿಗಲಿದೆ. ಇದರಿಂದ ಸರ್ಕಾರಕ್ಕೆ ಹೆಚ್ಚು ಆದಾಯ ಬರುವ ನಿರೀಕ್ಷೆ ಇದೆ ಎಂದರು.
ಸಂಪುಟ ಉಪಸಮಿತಿ: ಡಾ.ಕಸ್ತೂರಿ ರಂಗನ್ ವರದಿ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಅರಣ್ಯ ಸಚಿವರ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಈಗಾಗಲೇ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಈ ವರದಿ ಕುರಿತು ನಾಲ್ಕನೇ ಕರಡು ಅಧಿಸೂಚನೆ ಹೊರಡಿಸಿದೆ. ಡಿ.31 ರೊಳಗೆ ವರದಿ ಜಾರಿಗೆ ಸಂಬಂಧಿಸಿದಂತೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ರಾಷ್ಟ್ರೀಯ ಹಸಿರು ಪೀಠ ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದೆ ಎಂದು ತಿಳಿಸಿದರು.
Courtesyg: Google (photo)