ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಡಿ.೨ರಂದು ಧಾರವಾಡ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಕೋವಿಡ್ ನೆಪವೊಡ್ಡಿ ಶಾಲೆಗಳ ಮಾನ್ಯತೆ ನವೀಕರಿಸಲು ಸರ್ಕಾರ ನಿರಾಕರಿಸುತ್ತಿದೆ. ಶಿಕ್ಷಕರಿಗೆ 21,400 ರೂ. ವೇತನ ನೀಡಬೇಕು ಎಂದು ಆದೇಶಿಸಿ ಖಾಸಗಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿದೆ ಎಂದು ಸಂಘ ಆರೋಪಿಸಿದೆ.
ಶಾಲೆಗಳನ್ನು ಮುಚ್ಚುವುದರಿಂದ ಲಕ್ಷಾಂತರ ಮಕ್ಕಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ. ಅಷ್ಟಲ್ಲದೆ, ಸುಪ್ರೀಂಕೋರ್ಟ್ನ ಕೆಲವು ಆದೇಶಗಳನ್ನು ಖಾಸಗಿ ಶಾಲೆಗಳಿಗೆ ಮಾತ್ರ ಅನ್ವಯಿಸಲಾಗುತ್ತಿದೆ. ಸರ್ಕಾರದ ಇಂತಹ ನಿರ್ಧಾರದಿಂದ 10 ಸಾವಿರ ಶಾಲೆಗಳು ಹಾಗೂ ಲಕ್ಷಾಂತರ ಶಿಕ್ಷಕರು ಬೀದಿ ಪಾಲಾಗಬೇಕಾಗುತ್ತದೆ ಎಂದು ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದರು.
ವ್ಯತಿರಿಕ್ತ ನಿಲುವು: ಬೇಡಿಕೆಗಳ ಬಗ್ಗೆ ಚರ್ಚೆ ಮಾಡಿದ್ದು, ಕೆಲವು ಬೇಡಿಕೆ ಈಡೇರಿಸುವ ಭರವಸೆಯನ್ನು ಸರ್ಕಾರ ನೀಡಿದೆ. ರುಪ್ಸದ ಧರಣಿಗೆ ನಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ(ಕ್ಯಾಮ್ಸ್)ದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಹೇಳಿದ್ದಾರೆ.
Courtesyg: Google (photo)