ಇಡೀ ದೇಶ ಕೋವಿಡ್‌ನಿಂದ ತತ್ತರಿಸಿಹೊಗಿದೆ. ಚಳಿಗಾಲ ಆರಂಭವಾದಂತೆ ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್ ಹರಡುವಿಕೆಯಲ್ಲಿ ಸ್ಥಿರತೆ ಕಂಡುಬಂದಿದೆ. ಆದರೆ ಕೆಲ ರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಾ ಹೊಸ ಪ್ರಕರಣಗಳು ಮತ್ತು ಕೋವಿಡ್ ಸಾವಿನ ಸಂಖ್ಯೆ ಕಡಿಮೆಯಾಗುತ್ತಿದೆ. ಚಳಿಗಾಲದಲ್ಲಿ ಮತ್ತೆ ಹೆಚ್ಚಾಗುವಾ ಸಾಧ್ಯತೆ ಇದೆ ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪಾಲ್ ಅವರು ತಿಳಿಸಿದ್ದಾರೆ. ಕೋವಿಡ್-19 ಲಸಿಕೆಯ ರಾಷ್ಟ್ರೀಯ ತಜ್ಞರ ಗುಂಪಿನ ಅಧ್ಯಕ್ಷರಾಗಿರುವ ಪಾಲ್ ಅವರು, ಸ್ವಲ್ಪ ಮಟ್ಟಿಗೆ ಭಾರತ ಸ್ಥಿತಿ ಸುಧಾರಿಸಿದೆ. ಆದರೆ ಕೆಲ ರಾಜ್ಯಗಳಲ್ಲಿ ಹೆಚ್ಚುತ್ತಲೇ ಇದೆ ಅವುಗಳಲ್ಲಿ ಪ್ರಮುಖವಾಗಿ ಕೇರಳ, ಕರ್ನಾಟಕ, ರಾಜಸ್ಥಾನ, ಛತ್ತೀಸಗಡ ಮತ್ತು ಪಶ್ಚಿಮ ಬಂಗಾಳ ಹಾಗೂ 3-4 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾತ್ರ ಕೋವಿಡ್ ಸೋಂಕು ಹರಡುವಿಕೆ ಏರಿಕೆಯಲ್ಲಿದೆ. ದೇಶದಲ್ಲಿ ಶೇ 90ರಷ್ಟು ಜನರು ಸೋಂಕಿನ ಸಂಪರ್ಕಕ್ಕೆ ಒಳಪಡುವುದರಿಂದ ಇನ್ನು ಸಾಕಷ್ಟು ಕೆಲಸಗಳು ಮಾಡಬೇಕಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಚಲಿಗಾಲದಲ್ಲಿ ಈ ಸೋಂಕು ಯಾವ ರೀತಿ ಹರಡುತ್ತದೆ ಎಂಬುದನ್ನು ಇನ್ನೂ ತಿಳಿದುಕೊಳ್ಳಬೇಕಾದದ್ದು ಇದೆ. ಚಳಿಗಾಲದಲ್ಲಿ ಉತ್ತರ ಭಾರತದ ಹಲವೆಡೆ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಹಬ್ಬದ ಸಮಯ ಇರುವುದರಿಂದ ಬಹಳ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಕೋವಿಡ್ ನಿಯಂತ್ರಣದಲ್ಲಿ ಮುಂದಿನ ತಿಂಗಳುಗಳು ಅತ್ಯಂತ ಪ್ರಮುಖವಾದದ್ದು. ಕೋವಿಡ್ ನಿಯಂತ್ರಣ ಕಾರ್ಯಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸದೇ ಇದ್ದರೆ, ಇಷ್ಟು ದಿನದ ಶ್ರಮ ವ್ಯರ್ಥವಾಗುವ ಅಪಾಯವಿದೆ ಎಂದು ಎಚ್ಚರಿಕೆ ನೀಡಿದ್ದಾರೆ ಜನರಿಗೆ.