ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಭದ್ರವಾಗಿರಿಸಲು ಡಿಜಿ ಲಾಕರ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಾಗಾರದ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಈ ಕುರಿತು ಚರ್ಚೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಎಸ್ಸೆಸ್ಸೆಲ್ಸಿ ಯಿಂದ ಉನ್ನತ ಶಿಕ್ಷಣದ ಕೊನೆಯ ಹಂತದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಸುರಕ್ಷಿತವಾಗಿ ಭದ್ರವಾಗಿರಿಸುವುದು ಯೋಜನೆ ಉದ್ದೇಶ. ಭವಿಷ್ಯದಲ್ಲಿ ಕಾಗದ ರೂಪದ ಶೈಕ್ಷಣಿಕ ದಾಖಲೆಗಳಿಗೆ ಅವಕಾಶ ಇರುವುದಿಲ್ಲ. ಡಿಜಿ ಲಾಕರ್ ವ್ಯವಸ್ಥೆ ಜಾರಿಗೆ ಉನ್ನತಾಧಿಕಾರ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.
Courtesyg: Google (photo)