ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ದಿನವನ್ನು 100ರಿಂದ 150 ದಿನಗಳಿಗೆ ಏರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ನರೇಗಾ ಯೋಜನೆಯಡಿ ವ್ಯಕ್ತಿಯೊಬ್ಬರು ಗರಿಷ್ಠ 100 ದಿನ ಕೂಲಿ ಪಡೆಯಲು ಅವಕಾಶವಿತ್ತು. ಈಗಾಗಲೇ 100 ದಿನ ಪೂರೈಸಿದವರೆಗೆ ಹೆಚ್ಚುವರಿ 50 ದಿನ ಕೆಲಸ ಮಾಡಲು ಅವಕಾಶವಿದೆ. ರಾಜ್ಯಕ್ಕೆ 800 ಕೋಟಿ ರೂ. ಹೆಚ್ಚುವರಿ ಅನುದಾನ ಲಭ್ಯವಾಗಿದೆ. ಪರಿಷ್ಕೃತ ಆದೇಶ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿದೆ ಎಂದು ಹೇಳಿದ್ದಾರೆ.
Courtesyg: Google (photo)