ವಿವಿಧ ನೀರಾವರಿ ನಿಗಮಗಳು ಒಟ್ಟು 1.650 ಕೋಟಿ ರೂ. ಸಾಲ ಪಡೆಯಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಕೃಷ್ಣಾ ಭಾಗ್ಯ ಜಲನಿಗಮ 500 ಕೋಟಿ ರೂ., ಕರ್ನಾಟಕ ನೀರಾವರಿ ನಿಗಮ 650 ಕೋಟಿ ರೂ., ಕಾವೇರಿ ನೀರಾವರಿ ನಿಗಮ ಮತ್ತು ವಿಶ್ವೇಶ್ವರಯ್ಯ ಜಲ ನಿಗಮಗಳು ತಲಾ 250 ಕೋಟಿ ರೂ. ಸಾಲ ಪಡೆಯುವುದಕ್ಕಾಗಿ ಸರ್ಕಾರ ಖಾತರಿ ನೀಡಲಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ಆಯ್ಕೆಯಾಗಿ ವಿವಿಧ ಸೇವೆಯಲ್ಲಿರುವ ಅಧಿಕಾರಿಗಳು ತಪ್ಪು ಮಾಡಿದಾಗ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಮುನ್ನ ಇಲ್ಲಿಯವರೆಗೆ ಕೆಪಿಎಸ್‌ಸಿಯ ಸಲಹೆ ಪಡೆಯಬೇಕಾಗಿತ್ತು. ಆ ನಿಯಮವನ್ನು ಕೈಬಿಟ್ಟಿದ್ದು, ಇನ್ನು ಮುಂದೆ ಸರ್ಕಾರವೇ ನೇರ ಕ್ರಮ ತೆಗೆದುಕೊಳ್ಳಲು ಅವಕಾಶ ಕಲ್ಪಿಸುವಂತೆ ನಿಯಮಕ್ಕೆ ಬದಲಾವಣೆ ತರಲಾಗಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಕೈಗೊಳ್ಳಲು ಕೇಂದ್ರ ಸರ್ಕಾರ 500 ಕೋಟಿ ರೂ. ನೀಡಿದ್ದು, ರಾಜ್ಯ ಸರ್ಕಾರ 500 ಕೋಟಿ ರೂ. ಸೇರಿಸಿ ಒಟ್ಟು 1.000 ಕೋಟಿ ರೂ. ಬಳಸಿ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಕಟೀಲ್ ಇನ್ಮುಂದೆ ಪಟ್ಟಣ ಪಂಚಾಯಿತಿ: ದಕ್ಷಿಣಕನ್ನಡ ಜಿಲ್ಲೆಯ ಮನಬೆಟ್ಟು, ಕಿನ್ನಿಗೋಳಿ ಮತ್ತು ಕಟೀಲ್ ಗ್ರಾಮಪಂಚಾಯಿತಿಗಳನ್ನು ಸೇರಿಸಿ ಕಟೀಲ್ ಪಟ್ಟಣ ಪಂಚಾಯಿತಿ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
Courtesyg: Google (photo)