ಬೆಂಗಳೂರು: ಅಖಿಲ ಭಾರತ ಸಹಕಾರ ಸಪ್ತಾಹವನ್ನು ನ.14 ರಿಂದ 20 ರವರೆಗೆ ರಾಜ್ಯದಾದ್ಯಂತ ಆಚರಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಸಹಕಾರ ಸಪ್ತಾಹ ಕುರಿತು ಬುಧವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ವಿವಿಧ ಸಹಕಾರ ಮಹಾಮಂಡಲಗಳು ಮತ್ತು ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಆಯಾ ಜಿಲ್ಲೆಗಳಾ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಹಕಾರ ಸಪ್ತಾಹ ನಡೆಸಲಾಗುವುದು.ವಿಜಪುರದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಅವರು ಹೇಳಿದರು. ಈ ಕಾರ್ಯಕ್ರಮದಲ್ಲಿ ಸಹಕಾರ ವಲಯದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಐದು ಜನ ಸಹಕಾರಿಗಳನ್ನು ಮತ್ತು ಸಹಕಾರ ಇಲಾಖೆಯ ಒಬ್ಬ ನಿವೃತ್ತ ಅಧಿಕಾರಿಯನ್ನು ಸಮಿತಿ ಮೂಲಕ ಆಯ್ಕೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದೂ ತಿಳಿಸಿದರು. ಸಭೆಯಲ್ಲಿ ಶಾಸಕ ಜಿ.ಟಿ. ದೇವೆಗೌಡ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಸಹಕಾರ ಸಂಘಗಳ ನಿಬಂಧಕ ಎಸ್.ಜಿಯಾವುಲ್ ಇದ್ದರು.
Courtesyg: Google (photo)