ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟವು ಶಿಕ್ಷಣ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆಗೆ ಮುಂದಾಗಿದೆರೆ. ರಾಜ್ಯ ಸರ್ಕಾರ ಕೋವಿಡ್ ಸಮಯದಲ್ಲಿ ತೆಗೆದುಕೊಂಡ ನಿರ್ಧಾರಗಳಿಂದ 10 ಸಾವಿರ ಖಾಸಗಿ ಶಾಲೆಗಳು ಬಂದ್ ಆಗಿವೆ. ಲಕ್ಷಾಂತರ ಶಿಕ್ಷಕರ ಕುಟುಂಬಗಳು ಬೀದಿಪಾಲಾಗುವ ಆತಂಕ ಎದುರಾಗಿದೆ ಎಂದು ಒಕ್ಕೂಟ ದೂರಿದೆ. ನ.10ರಂದು ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ, ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಅವರ ಗೊಂದಲದ ಹೇಳಿಕೆಗಳು ಹಾಗೂ ಸರ್ಕಾರದ ತಾರತಮ್ಯ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಖಾಸಗಿ ಶಾಲೆಗಳಿಗೆ ನೆರವಾಗುವ ಬದಲು, ವಿನಾಕಾರಣ ಕಿರುಕುಳ ನೀಡಲಾಗುತ್ತಿದೆ. ಈ ವರ್ಷ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಮಾನ್ಯತೆ ನವೀಕರಣಕ್ಕೆ ಸಲ್ಲಿಕೆಯಾಗಿದ್ದ ೫ ಸಾವಿರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಮಕ್ಕಳ ಸುರಕ್ಷತೆಯ ನೆಪದಲ್ಲಿ ಖಾಸಗಿ ಶಾಲೆಗಳನ್ನು ಮುಚ್ಚಿಸುವ ಪ್ರಯತ್ನ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಒಂದು ಲಕ್ಷ ಶಿಕ್ಷಕರು ಮತ್ತು ಆಡಳಿತ ಮಂಡಳಿಗಳು ಭಾಗವಹಿಸಲಿವೆ ಎಮದು ಒಕ್ಕೂಟ ಹೇಳಿದೆ. ಶಿಕ್ಷಣ ಸಚಿವರು ದಿನಕ್ಕೊಂದು ಗೊಂದಲದ ಹೇಳಿಕೆ ನೀಡುತ್ತಿದ್ದು, ಖಾಸಗಿ ಶಾಲೆಗಳವರನ್ನು ಗೊಂದಲಕ್ಕೆ ಸಿಲುಕಿಸಿದ್ದಾರೆ. ಖಾಸಗಿ ಶಾಲೆಗಳಿಗೆ ನೀಡಬೇಕಿರುವ ಹಣ ಪಾವತಿಸಿಲ್ಲ. ಇದರಿಂದ ಅನೇಕ ಶಿಕ್ಷಕರ ಕುಟುಂಬಗಳು ಬೀದಿಪಾಲಾಗಿವೆ ಎಂದು ಹೇಳಿದೆ.