ಭಾರತೀಯ ತಂತ್ರಜ್ಞಾನ ಸಂಸ್ಥೆ ಮತ್ತು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್ ಕೋರ್ಸ್ಗಳನ್ನು ಪ್ರಾದೇಶಿಕ ಭಾಷೆ ಗಳಲ್ಲಿಯೂ ಬೋಧಿಸಲು ನಿರ್ಧರಿಸ ಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್ ಬೋಧನೆ ನಡೆಸಲು ಕೆಲವು ಐಐಟಿ ಮತ್ತು ಎನ್ಐಟಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪಠ್ಯಕ್ರಮ ನಿಗದಿ ಮಾಡುವ ಹೊಣೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ವಹಿಸಲಾಗಿದೆ. ೨೦೨೧ರಿಂದ ಜೆಇಇ (ಮೇನ್) ಅನ್ನು ಒಂಬತ್ತು ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ನಿರ್ಧಾರವನ್ನು ಎನ್ಟಿಎ ಕಳೆದ ತಿಂಗಳು ಪ್ರಕಟಿಸಿತ್ತು. ಪ್ರಸ್ತುತ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಜೆಇಇ (ಮೇನ್) ನಡೆಸಲಾಗುತ್ತಿದೆ.
Courtesyg: Google (photo)