ಭಾರತೀಯ ವಿಜ್ಞಾನ ಸಂಸ್ಥೆ ಸಹಭಾಗಿತ್ವದಲ್ಲ್ಲಿ ಕೃತಕ ಬುದ್ಧಿಮತ್ತೆ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ತಿಳಿಸಿದರು. ಮುಂಬರುವ ಸವಾಲುಗಳಿಗೆ ಪರಿಹಾರ ಕಂಡುಹಿಡಿಯಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸಲಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಹೇಳಿದರು. ವ್ಯವಸಾಯ ಕ್ಷೇತ್ರದ ಸುಧಾರಣೆಗೆ ತಂತ್ರಜ್ಞಾನ ಪರಿಣಾಮಕಾರಿಯಾಗಿ ಬಳಸಲು ಒತ್ತು ನೀಡಲೇಬೇಕು. ರಾಜ್ಯದ ಸುಮಾರು ಶೇ.60 ರಷ್ಟು ಜನ ಬದುಕಿಗಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಒಂದೆಡೆ ಆರ್ಥಿಕತೆ ಬೆಳೆಯುತ್ತಿದ್ದರೆ, ಮತ್ತೊಂದೆಡೆ ಕೃಷಿ ಕ್ಷೇತ್ರದ ಕೊಡುಗೆ ಕಡಿಮೆಯಾಗುತ್ತಿರುವುದು ಆಲೋಚನೆಗೀಡು ಮಾಡುವ ಅಂಶವಾಗಿದೆ ಎಂದರು. ರಾಜ್ಯದ ಜಿಡಿಪಿಗೆ ಕೃಷಿ ವಲಯದ ಕೊಡುಗೆ ಈಗ ಕೇವಲ ಶೇ.೧೬ರಷ್ಟಿದೆ. ಮುಂದಿನ ಐದು ವರ್ಷಗಳಲ್ಲಿ ಶೇ.30ಕ್ಕೆ ತಲುಪಿಸಬೇಕು. ಆಗ ಮಾತ್ರ ಹಳ್ಳಿಗರ ವಲಸೆ ತಪ್ಪುವ ಜೊತೆಗೆ ರಾಜ್ಯದ ಇತರ ಪ್ರದೇಶಗಳೂ ಬೆಳವಣಿಗೆ ಕಾಣುತ್ತವೆ ಎಂದು ಅಶ್ವತ್ಥ ನಾರಾಯಣ ವಿವರಿಸಿದರು.
Courtesyg: Google (photo)