ತುಮಕೂರು : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಶುರುವಾಗಿದೆ. ಇದರಿಂದಾಗಿ ಶೈಕ್ಷಣಿಕ ಚಟುವಟಿಕೆಯ ಮೇಲೆ ಪರಿಣಾಮ ಬೀರಿದೆ. ಇದರ ನಡುವೆಯೂ ಜುಲೈ.15, 2021ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವ ಚಿಂತನೆ ನಡೆದಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊರೋನಾ ಸೋಂಕಿನ ಭೀತಿಯ ನಡುವೆಯೂ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವಂತ ತುರ್ತು ಪರಿಸ್ಥಿತಿ ಬಂದೊಂದಗಿದೆ. ಸದ್ಯಕ್ಕೆ 1 ರಿಂದ 5ನೇ ತರಗತಿ ಮಕ್ಕಳಿಗೆ ತರಗತಿಯನ್ನು ಆರಂಭಿಸುವುದಿಲ್ಲ. ಈ ನಿಯಮ ಮೀರಿ, ಖಾಸಗಿ ಶಾಲೆಗಳು 1 ರಿಂದ 5ನೇ ತರಗತಿ ಆರಂಭಿಸಿದ್ರೇ.. ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಶಾಲೆ ಆರಂಭವಾಗದ ಕಾರಣದಿಂದಾಗಿ ಮಕ್ಕಳು ಗಣಿತವನ್ನೇ ಮರೆತಿದ್ದಾರೆ. ಪಠ್ಯ ವಿಷಯ ಸೇರಿದಂತೆ ಭಾಷೆ ಮರೆತಿದ್ದಾರೆ. ಇದರ ಬಗ್ಗೆ ಅಜೀಂ ಪ್ರೇಮ್ ಜಿ ವಿವಿ ನೀಡಿದಂತ ವರದಿಯು ಆಘಾತಕಾರಿಯಾಗಿದೆ ಎಂಬುದಾಗಿ ತಿಳಿಸಿದರು. ಕೊರೋನಾ ಎರಡನೇ ಅಲೆ ಶುರುವಾಗಿದೆ. ಕೊರೋನಾ ಮಾರ್ಗಸೂಚಿ ಕ್ರಮಗಳನ್ನು ರಾಜ್ಯದ ಜನರು ಕಡ್ಡಾಯವಾಗಿ ಪಾಲಿಸೋ ಅಗತ್ಯವಿದೆ. ಇದರ ಮಧ್ಯೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ, ಯಾವುದೇ ತೊಂದರೆ ಆಗದಂತೆ ಜುಲೈ 15, 2021ರಿಂದ ಮುಂದಿನ ಶೈಕ್ಷಣಿಕ ವರ್ಷವನ್ನು ಆರಂಭಿಸುವ ಚಿಂತನೆ ನಡೆಸಲಾಗಿದೆ ಎಂದರು.