ಜೂನ್ ಮೊದಲನೇ ವಾರ ಎಸ್ಸೆಸ್ಸೆಲ್ಸಿ ಹಾಗೂ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಸಲು ತಾತ್ಕಾಲಿಕವಾಗಿ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರೀಕ್ಷೆ ದೃಷ್ಟಿಯಿಂದ ಬೋಧನೆ, ಕಲಿಕೆಗೆ ವಿಷಯಗಳನ್ನು ಶಿಕ್ಷಣ ಇಲಾಖೆ ಅಂತಿಮಗೊಳಿಸಿದೆ. ಈ ವಿವರಗಳನ್ನು ಶಾಲೆಗಳಿಗೆ ತಲುಪಿಸಲಾಗುವುದು. ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಯಾವ ಪಠ್ಯ ಅನಗತ್ಯ, ಪಿಯುಸಿಗೆ ಯಾವುದು ಅಗತ್ಯ ಎಂಬ ತೀರ್ಮಾನಿಸಲು ತಜ್ಞರು ಎರಡು ಸುತ್ತು ಹಾಗೂ ಆಯುಕ್ತರು ಮೂರು ಸುತ್ತಿನ ಸಭೆ ನಡೆಸಿ, ಪಠ್ಯ ಅಂತಿಮಗೊಳಿಸಿದ್ದಾರೆ. ಶೈಕ್ಷಣಿಕ ವರ್ಷವನ್ನು ಜುಲೈ೧ರಿಂದ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಒಂದರಿಂದ ಒಂಬತ್ತನೇ ತರಗತಿಗೆ ಪಠ್ಯ ಕಡಿತದ ಪ್ರಸ್ತಾವ ಇಲ್ಲ. ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿ ಅಂತಿಮಗೊಳಿಸಲಾಗಿದೆ ಎಂದರು.
Courtesyg: Google (photo)