ರಾಜ್ಯದಲ್ಲಿ ಮುಂದುವರೆದ ಮಳೆಗೆ 6ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮುಂಗಾರು ಹೆಚ್ಚಾಗಿರುವುದರಿಂದ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ ಇರುವುದರಿಂದ ಅ.15ರವರೆಗೆ ‘ರೆಡ್ ಅಲರ್ಟ್’ ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಕಲಬುರ್ಗಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೀದರ್, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ ಅ.16ರವರೆಗೆ ಹೆಚ್ಚು ಮಳೆಯಾಗಲಿದೆ. ಈ ಭಾಗದಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

Courtesyg: Google (photo)

Journalist,Translator,avid bibliophile

Leave a Reply

Your email address will not be published. Required fields are marked *

Back To Top