ಲಸಿಕೆ ಪಡೆಯಲು ತಯಾರಾಗಲು ಸೂಚನೆ

ಕೋವಿಡ್ ಲಸಿಕೆ ಪೂರೈಕೆ ಶೀಘ್ರವೇ ಆರಂಭವಾಗಲಿದ್ದು, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸಿದ್ಧವಾಗಿರಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ಕಳುಹಿಸಲಾಗುವುದು. ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಚತ್ತೀಸಗಢ, ದೆಹಲಿ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್, ಅರುಣಾಚಲ ಪ್ರದೇಶ, ಚಂಡೀಗಡ, ನಗರ್ ಹವೇಲಿ, ದಮನ್ ಮತ್ತು ಡಿಯು, ಗೋವಾ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಲಕ್ಷದ್ವೀಪ, ಮಣಿಪುರ, ಮೇಘಾಲಯ, ಮಿಜೋರಾಂ, ಪುದುಚೇರಿ, ಸಿಕ್ಕಿಂ, ತ್ರಿಪುರಾ ಮತ್ತು ಉತ್ತರಾಖಂಡಗಳಿಗೆ ಕೇಂದ್ರದಿಂದ  ಸೂಚನೆ ರವಾನೆಯಾಗಿದೆ.

ಪುಣೆಯಿಂದ ಕೋವಿಡ್ ಲಸಿಕೆಗಳನ್ನು ದೇಶದೆಲ್ಲೆಡೆಗೆ ಸಾಗಿಸಲು ಸಜ್ಜಾಗಿರುವುದಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ. ಸೀರಂ ಇನ್‌ಸ್ಟಿಟ್ಯೂಟ್‌ನ ಕೋವಿಶೀಲ್ಡ್ ಲಸಿಕೆಗಳು ಪುಣೆ ವಿಮಾನ ನಿಲ್ದಾಣದಿಂದ ಎಲ್ಲ ಕಡೆಗೆ ಸರಬರಾಜು ಆಗಲಿವೆ. ಎಎಐ ಅಂಗಸಂಸ್ಥೆಗಳಾದ ಎಎಐ ಕಾರ್ಗೋ ಲಾಜಿಸ್ಟಿಕ್ಸ್ ಮತ್ತು ಅಲೈಡ್ ಸರ್ವೀಸಸ್ ಕಂಪನಿ ಕೂಡ ಈ ಕಾರ್ಯಕ್ಕೆ ಸಿದ್ಧವಾಗಿವೆ. ಕೋವಿಡ್ ಸಕ್ರಿಯ ಪ್ರಕರಣಗಳು ಶೇ.56ರಷ್ಟಿರುವ  ಮಹಾರಾಷ್ಟ್ರ, ಕೇರಳ, ಛತ್ತೀಸಗಡ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳು ಕಟ್ಟೆಚ್ಚರದಿಂದ ಇರಬೇಕು. ಈ  ರಾಜ್ಯಗಳಲ್ಲಿ ಇತ್ತೀಚೆಗೆ ಪ್ರಕರಣಗಳು ಹೆಚ್ಚಿದ್ದು,  ನಿಯಂತ್ರಣಕ್ಕೆ ತ್ವರಿತ ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸೂಚನೆ ನೀಡಿದ್ದಾರೆ.

Courtesyg: Google (photo)

Journalist,Translator,avid bibliophile

Leave a Reply

Your email address will not be published. Required fields are marked *

Back To Top