ಸಂಕ್ರಾಂತಿಗೆ ನಂತರ ಪದವಿ ತರಗತಿ ಆರಂಭ

ಸಂಕ್ರಾಂತಿಹಬ್ಬದ ಬಳಿಕ ಪ್ರಥಮ ಮತ್ತು ದ್ವಿತೀಯ ಪದವಿ ವಿದ್ಯಾರ್ಥಿಗಳಿಗೆ ಆಫ್‌ಲೈನ್ ತರಗತಿಗಳು ಪ್ರಾರಂಭವಾಗಲಿವೆ. ಸರ್ಕಾರಿ ಮತ್ತು ಖಾಸಗಿ ವಲಯದ ವಿಶ್ವವಿದ್ಯಾನಿಲಯಗಳ ಕುಲಪತಿಗಳು ಹಾಗೂ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ವಿಷಯ ತಿಳಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದವರು ಆಫ್‌ಲೈನ್ ತರಗತಿಗಳನ್ನು ಆರಂಭಿಸುವಂತೆ ಸಲಹೆ ನೀಡಿದರು. ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್‌ ತರಗತಿಗಳ ಅಂತಿಮ ವರ್ಷ ಮತ್ತು ಅಂತಿಮ ಸೆಮಿಸ್ಟರ್‌ನ ಆಫ್‌ಲೈನ್ ತರಗತಿಗಳು ನಡೆಯುತ್ತಿವೆ.

ದ್ವಿತೀಯ ಪಿಯು ಪರೀಕ್ಷೆಯನ್ನು ಮೇ ತಿಂಗಳಲ್ಲಿ ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಲಾಗುವುದು. ಯುಜಿಸಿ ನಿಯಮದಂತೆ ಮಾರ್ಚ್ನಲ್ಲಿ ಪರೀಕ್ಷೆ ಮುಗಿಯಬೇಕಿದ್ದು, ಹಲವು ವಿಶ್ವವಿದ್ಯಾಲಯಗಳ ಕಾಲೇಜುಗಳಲ್ಲಿ ಪಠ್ಯಕ್ರಮಗಳು ಪೂರ್ಣಗೊಂಡಿಲ್ಲ. ಹೀಗಾಗಿ, ಏಪ್ರಿಲ್ ಅಥವಾ ಮೇನಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ  ಎಂದರು.

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕರ‍್ಯ ನಿರ್ವಹಿಸುತ್ತಿರುವ 15 ಸಾವಿರ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರಿಸಲು ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿ ಬಸ್ ಪಾಸ್ ಕುರಿತು ಕೆಲವು ಗೊಂದಲಗಳಿದ್ದು, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಪದವಿ ತರಗತಿಗಳು ಆರಂಭವಾದ ಮೇಲೆ ಪರಿಶಿಷ್ಟ ಜಾತಿ- ವರ್ಗದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆ ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದರು.

Courtesyg: Google (photo)

Journalist,Translator,avid bibliophile

Leave a Reply

Your email address will not be published. Required fields are marked *

Back To Top