ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ 32 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಗುರಿ ತಲುಪಲು ಮತ್ತು ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ, ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಈ ಬಾರಿ ಉತ್ತಮ ಮಳೆ ಆಗಿರುವುದರಿಂದ, ಹಿಂಗಾರಿನಲ್ಲೂ ಹೆಚ್ಚು ಪ್ರಮಾಣದಲ್ಲಿ ಬಿತ್ತನೆಯಾಗುವ ನಿರೀಕ್ಷೆಯಿದೆ. ಅಗತ್ಯವಾದ ರಸಗೊಬ್ಬರ, ಯೂರಿಯಾ ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕು. ಈಗಾಗಲೇ 11.19ಲಕ್ಷ ಹೆಕ್ಟೇರ್ (ಶೇ.35) ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹಿಂಗಾರು ಅವಧಿಯಲ್ಲಿ ಜೋಳ ಮತ್ತು ಕಡಲೆ ಪ್ರಮುಖ ಬೆಳೆಗಳು. ಅ. 29ರವರೆಗೆ ದ್ವಿದಳ ಧಾನ್ಯಗಳ ಬಿತ್ತನೆ 14.28 ಲಕ್ಷ ಹೆಕ್ಟೇರ್ ಗುರಿಯಲ್ಲಿ 5.94 ಲಕ್ಷ ಹೆಕ್ಟೇರ್ ಹಾಗೂ ಆಹಾರ ಧಾನ್ಯಗಳ 27.54 ಲಕ್ಷ ಹೆಕ್ಟೇರ್ ಗುರಿಯಲ್ಲಿ 9.73 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ ಎಂದರು.
Courtesyg: Google (photo)