ಹೊಸ ಸ್ವರೂಪದ ಕೊರೊನಾ ವೈರಸ್

ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿದ್ದು, ಅತ್ಯಂತ ವೇಗವಾಗಿ ಹರಡುತ್ತಿದೆ  ಎಂದು ಬ್ರಿಟನ್ ಸರ್ಕಾರ ಹೇಳಿದೆ. ಈ ಹಿನ್ನೆಲೆಯಲ್ಲಿ ಬ್ರಿಟನ್‌ನಿಂದ ಆಗಮಿಸುವ ಎಲ್ಲಾ ವಿಮಾನಗಳನ್ನು ಯೂರೋಪ್‌ನ ಹಲವು ರಾಷ್ಟ್ರಗಳು ರದ್ದುಪಡಿಸಿವೆ. ಹೊಸ ವೈರಸ್ ಹರಡುವಿಕೆ ತಡೆಗಟ್ಟಲು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಐರೋಪ್ಯ ರಾಷ್ಟ್ರಗಳಿಗೆ ಸೂಚನೆ ನೀಡಿದೆ.

ಬ್ರಿಟನ್‌ನ ಕೆಲವು ಭಾಗದಲ್ಲಿ ಮಾತ್ರ ಹೊಸ ವೈರಸ್ ಪತ್ತೆಯಾಗಿದೆ. ನಗರ ಪ್ರದೇಶಗಳಲ್ಲಿ ಕಠಿಣ ಲಾಕ್‌ಡೌನ್ ಹೇರಲಾಗಿದೆ. ಹಲವು ಪ್ರದೇಶಗಳಲ್ಲಿ ಭಾನುವಾರದಿಂದ ಹಾಗೂ ಕೆಲವೆಡೆ ಡಿ.26ರಿಂದ ಲಾಕ್‌ಡೌನ್ ಜಾರಿಯಾಗಿದೆ. ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಗೆ ಜನರು ಸೇರುವುದನ್ನು ನಿಷೇಧಿಸಲಾಗಿದೆ. ಇದೇ ವೈರಸ್ ಡೆನ್ಮಾರ್ಕ್ ಹಾಗೂ ನೆದರ್‌ಲೆಂಡ್‌ನಲ್ಲಿ ಪತ್ತೆಯಾಗಿವೆ. ಯೂರೋಪ್‌ನ ಎಲ್ಲ   ರಾಷ್ಟ್ರಗಳಲ್ಲೂ ಈ ವೈರಸ್ ಹರಡಿರುವ ಅಪಾಯವಿದೆ. ಬೆಲ್ಜಿಯಂ, ಆಸ್ಟ್ರಿಯಾ, ನೆದರ್‌ಲೆಂಡ್ಸ್, ಡೆನ್ಮಾರ್ಕ್, ಸ್ಪೇನ್ ಈಗಾಗಲೇ ಬ್ರಿಟನ್‌ನಿಂದ ವಿಮಾನ ಸಂಚಾರವನ್ನು ರದ್ದುಪಡಿಸಿವೆ. ಜರ್ಮನಿ ಈ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದ ಆರೋಗ್ಯ ಸಚಿವಾಲಯ ಜಂಟಿ ಮೇಲ್ವಿಚಾರಣಾ ಸಮಿತಿಯ ತುರ್ತು ಸಭೆಯನ್ನು ಕರೆದಿದೆ. ಆರೋಗ್ಯ ಸೇವೆಗಳ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ  ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಭಾರತದ ಪ್ರತಿನಿದಿ ಡಾ. ರಾಡ್ರಿಕೊ ಎಚ್. ಆಫ್ರಿನ್ ಪಾಲ್ಗೊಳ್ಳಲಿದ್ದಾರೆ.

Courtesyg: Google (photo)

 

 

 

 

Journalist,Translator,avid bibliophile

Leave a Reply

Your email address will not be published. Required fields are marked *

Back To Top