ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಮುಂದಿನ ಮೂರು ತಿಂಗಳಲ್ಲಿ ಷೇರು ವಿಕ್ರಯ ಮತ್ತು ಸಾಲಪತ್ರ ಮಾರಾಟ ಮೂಲಕ 25 ಸಾವಿರ ಕೋಟಿ ರೂ. ಬಂಡವಾಳ ಸಂಗ್ರಹಿಸುವ ಚಿಂತನೆ ಹೊಂದಿವೆ. ಶಾಸನಬದ್ಧ ಅಗತ್ಯಗಳನ್ನು ಪೂರೈಸಿಕೊಳ್ಳಲು ಹಾಗೂ ಸಾಲದ ಬೇಡಿಕೆಯಲ್ಲಿ ಆಗಲಿರುವ ಹೆಚ್ಚಳಕ್ಕೆ ಸ್ಪಂದಿಸಲು ಬಂಡವಾಳ ಬಳಕೆ ಆಗಲಿದೆ.
ಇತ್ತೀಚೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ 40 ಸಾವಿರ ಕೋಟಿ ರೂ. ಮಾರುಕಟ್ಟೆಯಿಂದ ಸಂಗ್ರಹಿಸಿವೆ ಎಂದು ಹಣಕಾಸು ಸೇವೆಗಳ ಕಾರ್ಯದರ್ಶಿ ದೇಬಶಿಶ್ ಪಾಂಡಾ ತಿಳಿಸಿದ್ದಾರೆ. ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಹಣಕಾಸಿನ ಸ್ಥಿತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಪಾಂಡಾ, 12 ಬ್ಯಾಂಕ್‌ಗಳ ಪೈಕಿ 11 ಕಳೆದ ತ್ರೈಮಾಸಿಕದಲ್ಲಿ ಲಾಭ ಗಳಿಸಿವೆ. ವಸೂಲಾಗದ ಸಾಲದ ಪ್ರಮಾಣದಲ್ಲಿ ಇಳಿಕೆ ಕಂಡುಬAದಿದೆ ಎಂದು ಹೇಳಿದ್ದಾರೆ.
Courtesyg: Google (photo)