ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ

ದೇಶದ ಕೆಲ ಸೂಕ್ಷ್ಮ ಪರಿಸರ ವಲಯದಿಂದ 50 ಕಿ.ಮೀ. ವ್ಯಾಪ್ತಿ ಪ್ರದೇಶಗಳಲ್ಲಿ ಗಣಿಗಾರಿಕೆಗೆ ನಿಷೇಧ ಹೇರುವ ನಿರ್ದೇಶನ ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.  ಕಲ್ಲಿದ್ದಲು ಗಣಿಗಾರಿಕೆ ಹರಾಜು ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ಜಾರ್ಖಂಡ್ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ, ಅರಣ್ಯಗಳ ಆರ್ಥಿಕ ಮೌಲ್ಯವನ್ನು ಸರ್ಕಾರಗಳು ಪರಿಗಣಿಸದೇ ಇರುವ ಕಾರಣ ಇಂಥ ಸಮಸ್ಯೆಗಳು ಉದ್ಭವಿಸುತ್ತದೆ. ದೇಶದಲ್ಲಿರುವ ಅಭಿ ವೃದ್ಧಿ ಯೋಜನೆಗಳನ್ನು ನಿಲ್ಲಿಸಲು ನಾವು ಬಯಸುವುದಿಲ್ಲ. ಆದರೆ ಇದಕ್ಕಾಗಿ ನೈಸರ್ಗಿಕ ಸಂಪನ್ಮೂಲ ನಾಶ ಸರಿಯಲ್ಲ ಎಂದು ಮುಖ್ಯನ್ಯಾಯಮೂರ್ತಿ ಎಸ್.ಎ. ಬೊಬಡೆ ಅವರು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರಿಗೆ ಹೇಳಿದರು. ೨೦೧೮ರಲ್ಲಿ ದೇಶದ ೨೧ ರಾಷ್ಟ್ರೀಯ ಉದ್ಯಾನ ಹಾಗೂ ವನ್ಯಜೀವಿ ಸಂರಕ್ಷಿತಾ ರಣ್ಯಗಳ ೧೦ ಕಿ.ಮೀ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿ ಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಗಣಿಗಾರಿಕೆಗೆ ಸಂಬಂಧಿಸಿದAತೆ ಪರಿಸರದ ಮೇಲಾಗುವ ಪರಿಣಾಮದ ಕುರಿತು ಅಧ್ಯಯನ ನಡೆಸಲು ತಜ್ಞರ ಸಮಿತಿಯೊಂದನ್ನು ರಚಿಸುವ ಕುರಿತೂ ಇದೇ ವೇಳೆ ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿತು. ಈ ಸಮಿತಿಗೆ ಎಲ್ಲ ಮಾಹಿತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಲಿ. ಈ ಸಮಿತಿಯು ಒಂದು ತಿಂಗಳೊಳಗೆ ನಿರ್ಧಾರಕ್ಕೆ ಬರಲಿ. ಇಲ್ಲವಾದಲ್ಲಿ ನಾವು ಇದಕ್ಕೆ ತಡೆ ನೀಡುತ್ತೇವೆ ಎಂದು ವೇಣುಗೋಪಾಲ್ ಅವರಿಗೆ ಪೀಠವು ತಿಳಿಸಿತು.

Courtesyg: Google (photo)

 

Journalist,Translator,avid bibliophile

Leave a Reply

Your email address will not be published. Required fields are marked *

Back To Top