ದೇಶದ ದೊಡ್ಡ ಹಬ್ಬವಾದ ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‌ಜಿಟಿ), ಸೇರಿದಂತೆ 18 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಮೇಲ್ಮನವಿಯ ಸಲ್ಲಿಸಿದವು, ವಿಚಾರಣೆಗೆ ಒತ್ತು ನೀಡಿರುವ ಕರ್ನಾಟಕವೂ ಸರ್ಕಾರಗಳಿಗೆ ಬುಧವಾರ ನೋಟಿಸ್ ಜಾರಿ ಮಾಡಿದೆ. ದೀಪಾವಳಿ ಪ್ರಯುಕ್ತ ಪಟಾಕಿ ನಿಷೇಧ ಕೋರಿ ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ, ಗುರುವಾರದೊಳಗೇ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ನವೆಂಬರ್ 7ರಿಂದ 30ರವರೆಗೆ ಪಟಾಕಿ ನಿಷೇಧಿಸುವ ಸಂಬಂಧ ಪ್ರತಿಕ್ರಿಯೆ ನೀಡುವಂತೆ ದೆಹಲಿ, ಹರಿಯಾಣ, ಉತ್ತರ ಪ್ರದೇಶ ಸರ್ಕಾರಗಳಿಗೆ ಈ ಹಿಂದೆಯೇ ನ್ಯಾಯಪೀಠ ಸೂಚಿಸಿದೆ. ಕರ್ನಾಟಕ, ಆಂಧ್ರಪ್ರದೇಶ, ಬಿಹಾರ, ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ ಪ್ರಮುಖ ನಗರಗಳಲ್ಲಿನ ಗಾಳಿಯ ಗುಣಮಟ್ಟ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಮಾಲಿನ್ಯ ನಿಯಂತ್ರಣ ನಿಯಮಗಳ ಉಲ್ಲಂಘನೆಯ ಪ್ರಮಾಣ ಹೆಚ್ಚಿರುವುದೇ ಈ ರಾಜ್ಯಗಳ 122 ನಗರಗಳಲ್ಲಿ ಗಾಳಿಯ ಗುಣಮಟ್ಟ ಹದಗೆಡುವುದಕ್ಕೆ ಕಾರಣ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿ ಬಹಿರಂಗಪಡಿಸಿದ್ದಾಗಿ ವಿಚಾರಣೆಯ ವೇಳೆ ನ್ಯಾಯಪೀಠಕ್ಕೆ ವಿವರಿಸಲಾಯಿತು. ರಾಜ್ಯದ ಬೆಂಗಳೂರು, ದಾವಣಗೆರೆ, ಹುಬ್ಬಳ್ಳಿ– ಧಾರವಾಡ ಮತ್ತು ಕಲಬುರ್ಗಿ ನಗರಗಳಲ್ಲಿ ಆಗಸ್ಟ್ ಮಧ್ಯಭಾಗದಲ್ಲಿ ಗಾಳಿಯ ಗುಣಮಟ್ಟ ಕಳಪೆಯಾಗಿತ್ತು ಎಂದು ಮಂಡಳಿಯ ವರದಿ ಹೇಳಿದೆ. ಒಡಿಶಾ ಹಾಗೂ ರಾಜಸ್ಥಾನಗಳಲ್ಲಿ ಈಗಾಗಲೇ ಪಟಾಕಿ ಮಾರಾಟ ಮತ್ತು ಬಳಕೆ ನಿಷೇಧವಾಗಿದೆ.
Courtesyg: Google (photo)