ರಾಜ್ಯದಲ್ಲಿ ಮೊದಲ ಹಂತದ ಶಾಲೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಶಾಲೆ ಆರಂಭದ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ.
ಶಾಲೆಗಳ ಆರಂಭ ಕುರಿತು ಇಲಾಖೆಯ ಆಯುಕ್ತ ಅನ್ಬುಕುಮಾರ್ ಸರ್ಕಾರಕ್ಕೆ ಸಲ್ಲಿಸಲಿರುವ ವರದಿಯಲ್ಲಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು 14-15 ವರ್ಷದವರಾಗಿದ್ದು, ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡುವುದು, ಸಾನಿಟೈಸರ್ ಬಳಕೆ ಇತ್ಯಾದಿ ಬಗ್ಗೆ ಅರಿವು ಮೂಡಿಸುವುದು ಹಾಗೂ ಪರ್ಯಾಯ ದಿನಗಳಲ್ಲಿ ಶಾಲೆ ನಡೆಸಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನ. 18ರಿಂದ ಪ್ರಕ್ರಿಯೆ ಆರಂಭವಾಗಲಿದೆ. 2-3 ದಿನಗಳಲ್ಲಿ ಈ ಕುರಿತು ಚರ್ಚೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.