ಪಟಾಕಿ ಬಳಕೆಗೆ ನಿಷೇಧ ಹೇರಿದ ಎನ್‌ಜಿಟಿ

ರಾಷ್ಟ್ರಧಾನಿ ದೆಹಲಿಯಲ್ಲಿ ನ.9ರಿಂದ30ರವರೆಗೆ ಪಟಾಕಿ ಮಾರಾಟ ಮತ್ತು ಬಳಕೆಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸಂಪೂರ್ಣ ನಿಷೇಧಿಸಿ, ಆದೇಶ ಹೊರಡಿಸಿದೆ. ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್ ಮೇಲ್ಮನವಿ ಸಲ್ಲಿಸಿತ್ತು. ನ.5ರಂದು ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾ. ಆದರ್ಶಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ, ಕಳೆದ ವರ್ಷ ನವೆಂಬರ್‌ನಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆಯಿದ್ದ ಹಾಗೂ ವಾಯುಮಾಲಿನ್ಯ ಹೆಚ್ಚು ದಾಖಲಾಗಿದ್ದ ದೇಶದ ಇತರ ನಗರ ಮತ್ತು ಪಟ್ಟಣಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶಿಸಿದೆ. ಗಾಳಿಯ ಗುಣಮಟ್ಟ ಮಧ್ಯಮ ಅಥವಾ ಸಾಮಾನ್ಯವಾಗಿ ಮಟ್ಟದಲ್ಲಿರುವ ನಗರ- ಪಟ್ಟಣಗಳಲ್ಲಿ ಮಾತ್ರ ಹಸಿರು ಪಟಾಕಿಗಳ ಮಾರಾಟ ಹಾಗೂ ಬಳಕೆ ಮಾಡಬಹುದು. ಈ ಪಟ್ಟಣ-ನಗರಗಳಲ್ಲಿ ದೀಪಾವಳಿ, ಕ್ರಿಸ್‌ಮಸ್, ಹೊಸ ವರ್ಷಾಚರಣೆ ವೇಳೆ ಎರಡು ಗಂಟೆ ಕಾಲ ಪಟಾಕಿ ಸಿಡಿಸಬಹುದು ಎಂದು ಆದೇಶಿಸಿದೆ.

Courtesyg: Google (photo)

Journalist,Translator,avid bibliophile

Leave a Reply

Your email address will not be published. Required fields are marked *

Back To Top