ರಾಜ್ಯದಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮ-ನರೇಗಾ)ಯಡಿ ಇನ್ನಷ್ಟು ಕಾಮಗಾರಿ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ರಾಜ್ಯಕ್ಕೆ 1.200 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಲು ಸಮ್ಮತಿ ಸೂಚಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಕೇಂದ್ರ ಹಾಲಿ ವರ್ಷ 2 ಕೋಟಿ ಹೆಚ್ಚುವರಿ ಮಾನವ ದಿನಗಳನ್ನು ಸೃಷ್ಟಿಸಲು ಅವಕಾಶ ನೀಡಿದೆ. 2020-21ನೇ ಸಾಲಿಗೆ ಮನರೇಗಾ ಯೋಜನೆಯಡಿ 13 ಕೋಟಿ ಮಾನವ ದಿನಗಳ ಗುರಿ ನಿಗದಿಪಡಿಸಿದೆ. ಪ್ರವಾಹ ಸ್ಥಿತಿ ಹಿನ್ನೆಲೆಯಲ್ಲಿ ಹೆಚ್ಚುವರಿ ಅನುದಾನ ಮಂಜೂರು ಮಾಡಿದೆ ಎಂದರು. ಈಗಾಗಲೇ 10.50 ಕೋಟಿ ಮಾನವ ದಿನಗಳನ್ನು ಸೃಷ್ಟಿಸಿದ್ದು, 2 ಕೋಟಿ ಹೆಚ್ಚುವರಿ ಮಾನವದಿನಗಳ ಸೃಷ್ಟಿಗೆ 800 ಕೋಟಿ ರೂ.ಅನುದಾನದ ಭರವಸೆ ನೀಡಿದೆ. ರಾಜ್ಯದ 173 ತಾಲೂಕುಗಳಲ್ಲಿ ಪ್ರವಾಹ ತಲೆದೋರಿದೆ.ಶ್ಯಾಮಪ್ರಸಾದ್ ಮುಖರ್ಜಿ ಅರ್ಬನ್ ಮಿಷನ್ ಅಡಿ ಹೆಚ್ಚುವರಿ 90 ಕ್ಲಸ್ಟರ್‌ಗಳನ್ನು ಮಂಜೂರು ಮಾಡುವಂತೆ ರಾಜ್ಯ ಸಲ್ಲಿಸಿದ ಪ್ರಸ್ತಾವನೆಗೆ ಕೇಂದ್ರ ಸ್ಪಂದಿಸಿದೆ. 1.000 ಕೋಟಿ ರೂ. ಅನುದಾನದ ಸಾಧ್ಯತೆ ಇದೆ ಎಂದು ತಿಳಿಸಿದರು.
Courtesyg: Google (photo)