ದೇಶದ ಅರ್ಥ ವ್ಯವಸ್ಥೆ ನಿರೀಕ್ಷೆಗಿಂತಲೂ ಹೆಚ್ಚು ವೇಗವಾಗಿ ಚೇತರಿಕೆ ಕಂಡಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಹಬ್ಬಗಳು ಮುಗಿದ ನಂತರ ಮಾರುಕಟ್ಟೆಯಲ್ಲಿ ಬೇಡಿಕೆ ಎಷ್ಟು ಸ್ಥಿರವಾಗಿ ಇರುತ್ತದೆ ಎಂಬುದನ್ನು ಗಮನಿಸಬೇಕು. ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಅರ್ಥ ವ್ಯವಸ್ಥೆ ಶೇ.-೨೩.೯ರಷ್ಟು ಕುಸಿತ ಕಂಡಿದೆ. ಈ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ.– ೯.೫ರಷ್ಟು ಕುಸಿತ ಕಾಣಲಿದೆ ಎಂದು ಆರ್‌ಬಿಐ ಅಂದಾಜು ಮಾಡಿದೆ. ಅರ್ಥ ವ್ಯವಸ್ಥೆಯಲ್ಲಿ ಸುಧಾರಣೆ ಕಂಡುಬAದಿದ್ದರೂ, ಕೊರೊನಾ ಸೋಂಕು ಯುರೋಪಿನ ಕೆಲವೆಡೆ ಹಾಗೂ ದೇಶದ ಕೆಲವು ರಾಜ್ಯಗಳಲ್ಲಿ ಹೆಚ್ಚಾಗುತ್ತಿರುವುದು ಅರ್ಥ ವ್ಯವಸ್ಥೆ ಪಾಲಿಗೆ ಅಪಾಯಕಾರಿ ಎಂದು ಹೇಳಿದ್ದಾರೆ.
Courtesyg: Google (photo)