ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿರುವ ಬಾಕ್ಸರ್ ವಿಜೇಂದರ್ ಸಿಂಗ್ ಘೋರ ಕಾಯ್ದೆಗಳನ್ನು ಹಿಂಪಡೆಯದೇ ಇದ್ದರೆ ರಾಜೀವಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಹಿಂತಿರುಗಿಸುವುದಾಗಿ ಎಂದು ಹೇಳಿದ್ದಾರೆ. ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬಳಿಗೆ ತೆರಳಿದ ವಿಜೇಂದರ್ ಬೆಂಬಲ ಸೂಚಿಸಿದರು. ಹರಿಯಾಣದವರಾದ 35 ವರ್ಷದ ವಿಜೇಂದರ್ ಒಲಿಂಪಿಕ್ಸ್ ಬಾಕ್ಸಿಂಗ್ನಲ್ಲಿ ಭಾರತಕ್ಕೆ ಮೊದಲ ಪದಕ ಗಳಿಸಿದ ಹೆಗ್ಗಳಿಕೆ ಹೊಂದಿದ ಇವರು ರೈತರ ಪರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
Courtesyg: Google (photo)