ವಿದ್ಯಾಗಮ ಪುನರ್ ಆರಂಭ

ವಿದ್ಯಾಗಮ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ ಪುನರ್ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಬುಡಕಟ್ಟು ಮಕ್ಕಳು ಆನ್‌ಲೈನ್ ಮೂಲಕ ಶಿಕ್ಷಣ ಪಡೆಯಲು ಅನುಕೂಲ ಆಗುವಂತೆ ಲ್ಯಾಪ್‌ಟಾಪ್, ಇಂಟರ್ ನೆಟ್ ಮತ್ತು ಮೊಬೈಲ್ ಸೇರಿ ಅಗತ್ಯ ತಾಂತ್ರಿಕ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ವಕೀಲ ಎ.ಎ. ಸಂಜೀವ್ ನರೇನ್ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಗ್ರಾಮೀಣ ಪ್ರದೇಶದಲ್ಲಿ ತಾಂತ್ರಿಕ ಸೌಲಭ್ಯ ಹೊಂದಿರದ ಮಕ್ಕಳಿಗೆ ಶಿಕ್ಷಣ ನೀಡಲು ರೂಪಿಸಿರುವ ವಿದ್ಯಾಗಮ ಯೋಜನೆಯನ್ನು ಪುನರ್ ಆರಂಭಿಸಲು ಸಾಧ್ಯವೇ ಎಂಬ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳಬೇಕು. ಅಲ್ಲದೆ, ಕಾರ್ಪೋರೇಟ್ ಕಂಪನಿಗಳಿAದ ಸಾಮಾಜಿಕ ಹೊಣೆಗಾರಿಕೆ ನಿಧಿ ಸಂಗ್ರಹಿಸಬಹುದು ಎಂದು ಸೂಚಿಸಿತ್ತು. ಹೈಕೋರ್ಟ್ಗೆ ಮೆಮೊ ಸಲ್ಲಿಸಿದ ಸರ್ಕಾರ, ೨೦೨೦ರ ಜ.೧ರಿಂದ ವಿದ್ಯಾಗಮ ಯೋಜನೆಯನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲೂ ಪುನರ್ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿತು.

Courtesyg: Google (photo)

Journalist,Translator,avid bibliophile

Leave a Reply

Your email address will not be published. Required fields are marked *

Back To Top