ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕ ಹೆಚ್ಚಳ ವಿರೋಧಿಸಿ ಡಿ.21ರಂದು ರಾಜ್ಯದಾದ್ಯಂತ ಎಪಿಎಂಸಿ ಬಂದ್ ಮಾಡಲಾಗುತ್ತದೆ ಎಂದು ಎಪಿಎಂಸಿ ಕ್ರಿಯಾಸಮಿತಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ ತಿಳಿಸಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕವನ್ನು ಶೇ.೦.35 ರಿಂದ ಶೇ.1ಕ್ಕೆ ಹೆಚ್ಚಿಸಲಾಗಿದೆ. ಕೋವಿಡ್‌ನಿಂದ ವರ್ತಕರು ತೀವ್ರ ಸಮಸ್ಯೆ ಅನುಭವಿಸಿದ್ದು, ವಹಿವಾಟು ಚೇತರಿಸುತ್ತಿರುವಾಗ ಶುಲ್ಕ ಹೆಚ್ಚಳ ಮಾಡಿರುವುದು ಸರಿಯಲ್ಲ ಎಂದರು. ಬೆಂಗಳೂರಿನಲ್ಲಿ ಎಫ್‌ಕೆಸಿಸಿಐ ಹಾಗೂ ಕೆಸಿಸಿಐ ನೇತೃತ್ವದಲ್ಲಿ ಎಪಿಎಂಸಿ ವರ್ತಕರ ಸಂಘದ ಪದಾಧಿಕಾರಿಗಳ ಜೊತೆ ಡಿ.23ರಂದು ಸಭೆ ನಡೆಯಲಿದೆ. ಶುಲ್ಕ ಹೆಚ್ಚಳ ಹಿಂಪಡೆಯಬೇಕೆದು ಸಚಿವರಿಗೆ ಮನವಿ ಸಲ್ಲಿಸುತ್ತೇವೆ. ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಎಪಿಎಂಸಿ ಬಂದ್ ಮಾಡಲಾಗುತ್ತದೆ ಎಂದರು.
Courtesyg: Google (photo)