ಕೋವಿಡ್ ವ್ಯಾಪಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಮಾರ್ಗಸೂಚಿ ಹಾಗೂ ಪ್ರಮಾಣಿತ ಕಾರ್ಯಾಚರಣೆ ವಿಧಾನ(ಎಸ್‌ಒಪಿ)ಗಳ ಅನುಷ್ಠಾನದ ಕೊರತೆ ಇದಕ್ಕೆ ಕಾರಣ ಎಂದು ಹೇಳಿದೆ. ಕೋವಿಡ್ ಒಂದು ಜಾಗತಿಕ ಸಮರ. ಇದರಿಂದ ಜಗತ್ತಿನ ಎಲ್ಲರೂ ಒಂದಲ್ಲ ಒಂದು ರೀತಿ ತೊಂದರೆ ಅನುಭವಿಸುತ್ತಿದ್ದಾರೆ. ಕರ್ಫ್ಯೂ ಅಥವಾ ಲಾಕ್‌ಡೌನ್ ಹೇರುವ ಮುನ್ನ ಪ್ರಕಟಣೆ ಹೊರಡಿಸಬೇಕು. ಆಗ ಜನರು ಜೀವನ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅನುಕೂಲವಾಗಲಿದೆ ಎಂದು ನ್ಯಾ. ಅಶೋಕ್ ಭೂಷಣ್ ನೇತೃತ್ವದ ತ್ರಿಸದಸ್ಯ ಪೀಠ ಹೇಳಿದೆ.
ವೈದ್ಯರು, ಶುಶ್ರೂಶಕಿಯರು ಹಾಗೂ ಆರೋಗ್ಯ ಕಾರ್ಯಕರ್ತರ ತಂಡ ಕಳೆದ ಎಂಟು ತಿಂಗಳಿAದ ನಿರಂತರ ಕೆಲಸ ಮಾಡುತ್ತಿದ್ದು, ಮಾನಸಿಕ ಹಾಗೂ ದೈಹಿಕವಾಗಿ ದಣಿದಿದ್ದಾರೆ. ಅವರಿಗೆ ವಿಶ್ರಾಂತಿ ನೀಡಬೇಕಿದೆ. ಇಂಥ ಸಮಯದಲ್ಲಿ ರಾಜ್ಯ ಸರ್ಕಾರಗಳು ಕೇಂದ್ರದೊಟ್ಟಿಗೆ ಕೆಲಸ ಮಾಡಬೇಕು. ಜನರ ಆರೋಗ್ಯ ಮತ್ತು ಸುರಕ್ಷತೆ ಆದ್ಯತೆಯಾಗಬೇಕು ಎಂದೂ ನ್ಯಾ.ಆರ್.ಎಸ್.ರೆಡ್ಡಿ ಹಾಗೂ ಎಂ.ಆರ್.ಶಾ ಅವರ ಪೀಠ ತಿಳಿಸಿದೆ.
Courtesyg: Google (photo)