ಹುಲಿ ಸಂರಕ್ಷಣೆ ಉದ್ಯಾನಗಳಿಗೆ ಹೈಟೆಕ್ ಸ್ಪರ್ಶ

ರಾಜ್ಯದ ಹುಲಿ ಸಂರಕ್ಷಣೆ ಉದ್ಯಾನಗಳಿಗೆ ಹೈಟೆಕ್ ಸ್ಪರ್ಶ ನೀಡಲಾಗುವುದು. ತಂತ್ರಜ್ಞಾನ ಬಳಸಿ ಅಭಿವೃದ್ಧಿ ಪಡಿಸಲಾಗುವುದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ಹುಲಿ ಸಂರಕ್ಷಣಾ ಪ್ರತಿಷ್ಠಾನದ ಆಡಳಿತ ಮಂಡಳಿಯ 11ನೇ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಹುಲಿಗಳ ಸಂಖ್ಯೆಯಲ್ಲಿ ರಾಜ್ಯ ಮೂರನೇ ಸ್ಥಾನ ಪಡೆದುಕೊಂಡಿದೆ. ಹುಲಿಗಳನ್ನು ಸಂರಕ್ಷಿಸಿ, ಅವುಗಳ ಸಂತತಿಯನ್ನು ಉಳಿಸಬೇಕು. ನಾಗರಹೊಳೆ ಹುಲಿ ಸಂರಕ್ಷಣಾ ಪ್ರತಿಷ್ಠಾನವು ಹುಲಿಗಳಿಂದ ಹಸುಗಳನ್ನು ರಕ್ಷಿಸಲು ಸುರಕ್ಷಿತ ಶೆಡ್ ನಿರ್ಮಾಣ ಮಾಡಿದೆ. ಇದನ್ನು ದುರುಪಯೋಗ ಪಡಿಸಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಮೃಗಾಲಯಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮಾಡಲಾಗುವುದು. ಹುಲಿ ಸಂರಕ್ಷಣಾ ಪ್ರತಿಷ್ಠಾನ ನಿಧಿಯ ಉಳಿಕೆ ಅನುದಾನವನ್ನು ಇದಕ್ಕೆ ಬಳಸಲಾಗುವುದು ಎಂದು ತಿಳಿಸಿದರು.

Courtesyg: Google (photo)

Journalist,Translator,avid bibliophile

Leave a Reply

Your email address will not be published. Required fields are marked *

Back To Top