ವೃತ್ತಿಪರ ಕೋರ್ಸ್ಗಳ ಖಾಲಿ ಉಳಿದ ಸೀಟುಗಳ ಪ್ರವೇಶಕ್ಕೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ಅಗತ್ಯವಿದ್ದು, ಜ.15ರವರೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅಧ್ಯಕ್ಷರಿಗೆ ಉನ್ನತ ಶಿಕ್ಷಣ ಇಲಾಖೆ ಪತ್ರ ಬರೆದಿದೆ. ಉಳಿದ ವೃತ್ತಿಪರ ಸೀಟ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತೊಂದು ಅವಕಾಶ ನೀಡುವಂತೆ ವಿದ್ಯಾರ್ಥಿಗಳು ಹಾಗೂ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜ.15ರವರೆಗೆ ಕಾಲಾವಕಾಶ ವಿಸ್ತರಿಸಬೇಕೆಂದು ಕರ್ನಾಟಕಅನುದಾನರಹಿತ ಖಾಸಗಿ ಶೈಕ್ಷಣಿಕಕಾಲೇಜುಗಳ ಸಂಸ್ಥೆ ಕೋರಿದೆ. ಈ ಹಿನ್ನೆಲೆಯಲ್ಲಿ ಏಐಸಿಟಿಇಗೆ ಪತ್ರ ಬರೆಯಲಾಗಿದೆಎಂದುಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ವೃತ್ತಿಪರ ಕೋರ್ಸ್ಗೆ ಪ್ರವೇಶ ಪಡೆಯಲು ಡಿ.31 ಕೊನೆಯ ದಿನವಾಗಿತ್ತು. ಎಂಜಿನಿಯರಿಂಗ್ ಬದಲು ಆಯುಷ್, ಬಿಎಸ್ಸಿ, ಬಿಕಾಂ ಅಥವಾ ಇನ್ನಿತರ ಕೋರ್ಸ್ ಓದಲು ಇಚ್ಛಿಸುತ್ತೇವೆ. ಆಯುಷ್ ಕೋರ್ಸ್‌ಗಳಿಗೆ ಇನ್ನೂ ಕೌನ್ಸೆಲಿಂಗ್ ನಡೆಸಿಲ್ಲ. ಆದ್ದರಿಂದ, ಎಂಜಿನಿಯರಿಂಗ್ ಸೀಟು ಹಿಂಪಡೆದು ಶುಲ್ಕ ಮರುಪಾವತಿಸಬೇಕು ಎಂದು ಸಿಇಟಿ ಮಾಪ್‌ಅಪ್ ಸುತ್ತಿನಲ್ಲಿ ಸೀಟು ಪಡೆದಿದ್ದ ವಿದ್ಯಾರ್ಥಿಗಳು ಪರೀಕ್ಷಾ ಪ್ರಾಧಿಕಾರದ ಮುಂದೆ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದ್ದರು.
Courtesyg: Google (photo)