ಬೆಳ್ಳಂದೂರು, ಅಗರ ಮತ್ತು ವರ್ತೂರು ಕೆರೆಗಳ ಪುನಶ್ಚೇತನ ಕಾರ್ಯಕ್ಕೆ ಸಂಬAಧಿಸಿದ ಸಮಸ್ಯೆಗಳನ್ನು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ನೇತೃತ್ವದ ಮೇಲ್ವಿಚಾರಣೆ ಸಮಿತಿಯ ಗಮನಕ್ಕೆ ತರಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) ಸೂಚಿಸಿದೆ.
ಬೆಳ್ಳಂದೂರು, ಅಗರ ಮತ್ತು ವರ್ತೂರು ಕೆರೆಗಳಿಗೆ ತ್ಯಾಜ್ಯ ಹರಿಯುವಿಕೆ ಹಾಗೂ ಕೆರೆಗಳ ಸಮೀಪ ಘನತ್ಯಾಜ್ಯ ವಿಲೇವಾರಿಗೆ ಕಡಿವಾಣ ಹಾಕಬೇಕು. ಜಲಾನಯನ ಪ್ರದೇಶದ ಅತಿಕ್ರಮಣವನ್ನು ತಡೆಯಬೇಕು. ಕೆರೆಗಳ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳನ್ನು ನ್ಯಾಯಪೀಠ ವಿಚಾರಣೆ ನಡೆಸಿತು.
ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳ ಹತ್ತಿರ ಜೈವಿಕ ಉದ್ಯಾನ ಸ್ಥಾಪನೆಗೆ ಅನುಮತಿ ನೀಡುವಂತೆ ಬಿಡಿಎ ಹಾಗೂ ಪ್ರವಾಹದ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯವಿರುವ ಚರಂಡಿಗಳ ನಿರ್ಮಾಣಕ್ಕೆ ಅನುಮತಿ ಕೊಡುವಂತೆ ಬಿಬಿಎಂಪಿ ಮನವಿ ಮಾಡಿವೆ. ಇವುಗಳನ್ನು ಮೇಲ್ವಿಚಾರಣೆ ಸಮಿತಿ ಪರಿಶೀಲಿಸಲಿದೆ. ಸಮಿತಿಯ ತಜ್ಞರು ಸೂಕ್ತ ಪರಿಹಾರ ಸೂಚಿಸಲಿದ್ದಾರೆ. ಪರಿಸರ ಹಾಗೂ ಕೆರೆಗಳ ಸಂರಕ್ಷಣೆಗೆ ಎನ್‌ಜಿಟಿ ಆದ್ಯತೆ ನೀಡಲಿದ್ದು, ಈ ಸಂಬAಧ ಮಾರ್ಗಸೂಚಿಗಳನ್ನು ಪ್ರಕಟಿಸಿದೆ ಎಂದು ನ್ಯಾ. ಆದರ್ಶ್ಕುಮಾರ್ ಗೋಯಲ್ ಅವರಿದ್ದ ಪೀಠ ಹೇಳಿತು. ಜೀವ ವೈವಿಧ್ಯ ಉದ್ಯಾನಗಳನ್ನು ಕೆರೆಯ ಗಡಿಯೊಳಗೇ ನಿರ್ಮಿಸಬೇಕು ಎಂದು ಅಮಿಕಸ್ ಕ್ಯೂರಿ ರಾಜ್ ಪಂಜ್ವಾನಿ ಹೇಳಿದರು.
Courtesyg: Google (photo)