ರೈತರ ಹೊಲದಲ್ಲೇ ಮಣ್ಣು, ನೀರು, ರೋಗ ಪರೀಕ್ಷೆ ಮಾಡುವ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ “ಕೃಷಿ ಸಂಜೀವಿನಿ’ಯನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡಿದ್ದಾರೆ. ಇವುಗಳ ಕಾರ್ಯ ನಿರ್ವಹಣೆಯನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ವಾಹನಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರೈತರ ತಾಕುಗಳಲ್ಲೇ ಬೆಳೆಗಳಿಗೆ ಕಾಡುವ ಕೀಟ, ರೋಗ, ಕಳೆಗಳ ಬಾಧೆ, ಮಣ್ಣಿನ ಪೋಷಕಾಂಶ ಕೊರತೆ ಮತ್ತು ಸಮರ್ಪಕ ನಿರ್ವಹಣೆ ಕುರಿತು ಮಾರ್ಗೊಪಾಯಗಳನ್ನು ಒದಗಿಸುವುದು ಕೃಷಿ ಸಂಜೀವಿನಿಯ ಉದ್ದೇಶ. 155313 ಶುಲ್ಕರಹಿತ ಸಹಾಯವಾಣಿಗೆ ಕರೆಯು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಹೋಗಲಿದೆ. ರೈತರು ತಮ್ಮ ಸಮಸ್ಯೆಗೆ ಪರಿಹಾರ ಪಡೆಯಬಹುದು.ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್‌ನಂತೆ ಸಹಾಯವಾಣಿ ಕೆಲಸ ಮಾಡಲಿದೆ.
Courtesyg: Google (photo)