ಕೊರೊನಾ ಇರುವುದರಿಂದ ಈ ಬಾರಿ ಭೌತಿಕ ಹಾಗೂ ಆನ್ಲೈನ್ ಮೂಲಕ ಮೇಳ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಮೇಳಕ್ಕೆ ಭೌತಿಕವಾಗಿ 30 ಸಾವಿರ ರೈತರಿಗೆ ಪ್ರವೇಶ ಕಲ್ಪಿಸಲು ನಿರ್ಧರಿಸಲಾಗಿದೆ. ಕೊರೊನಾ ಇರುವುದರಿಂದ ಹೆಚ್ಚು ಜನ ಸೇರದಂತೆ ತಡೆಯಲು ನೋಂದಣಿ ಕಡ್ಡಾಯ ಮಾಡಲಾಗಿದೆ.
‘ಪ್ರತಿದಿನ ಆರು ಸಾವಿರ ನೋಂದಾಯಿತ ರೈತರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಬೆಳಿಗ್ಗೆ 9ರಿಂದ ಸಂಜೆ 5ಗಂಟೆಯವರೆಗೆ ಎರಡು ಅವಧಿಗಳಲ್ಲಿ ಮೇಳ ವೀಕ್ಷಿಸಬಹುದು. ಹೊರ ರಾಜ್ಯಗಳಿಂದ ಬರುವ ರೈತರು ಮೇಳದಲ್ಲಿ ಭಾಗವಹಿಸಲು ಕೆಲವು ನಿಯಮಗಳನ್ನು ಪಾಲಿಸಬೇಕು. ಮೇಳದ ಬಗ್ಗೆ ಮೂರು ಭಾಷೆಗಳಲ್ಲಿ ಸಾಕ್ಷ್ಯ ಚಿತ್ರಗಳನ್ನು ನಿರ್ಮಿಸಿ, ರೈತರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಮೇಳದ ಬಗ್ಗೆ ಹೆಚ್ಚಿನ ವಿವರ ಹಾಗೂ ನೋಂದಣಿ ಮಾಡಿಕೊಳ್ಳಲು ಇಚ್ಛಿಸುವವರು ಸಂಸ್ಥೆಯ ವೆಬ್ಸೈಟ್ https://nhf2021.