Author: Rutha Editor

Journalist,Translator,avid bibliophile

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿ ಪ್ರಕಟ

ಶ್ರೀ ನಾಗೇಶ ಹೆಗ್ಡೆ                      ಡಾ.ಸಿ.ಆರ್.ಚಂದ್ರಶೇಖರ್ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕೊಡಮಾಡುವ  ವಿಜ್ಞಾನ ಸಂವಹನೆ-ಜೀವಮಾನ ಸಾಧನೆಗಾಗಿ ಈ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿರುವ ಖ್ಯಾತ ಮನೋವೈದ್ಯರು, ಲೇಖಕರಾದ ಡಾ.ಸಿ.ಆರ್.ಚಂದ್ರಶೇಖರ್(2021ನೇ ಸಾಲು) ಹಾಗೂ ಖ್ಯಾತ ವಿಜ್ಞಾನ ಲೇಖಕರು ಹಾಗೂ ಪರಿಸರ ತಜ್ಞರಾದ ಶ್ರೀ ನಾಗೇಶ ಹೆಗ್ಡೆ(2020 ನೇ ಸಾಲು) ಅವರು ಆಯ್ಕೆಯಾಗಿರುತ್ತಾರೆ. ಪ್ರಶಸ್ತಿ ಒಂದು ಲಕ್ಷ ರೂ ನಗದು […]

‘ನಮ್ಮ ಕಾರ್ಗೋ’ ಸೇವೆ ಹಾಗೂ ರಕ್ತದಾನದ ಬಸ್‌ಗೆ ಸಿಎಂ ಚಾಲನೆ

ಬೆಂಗಳೂರು,ಫೆ.26- ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೂತನ ಪಾರ್ಸಲ್ ಕಾರ್ಗೊ ಸೇವೆ ಮತ್ತು ಕೆಎಸ್‍ಆರ್‍ಟಿಸಿ, ಕಿದ್ವಾಯಿ, ರೋಟರಿ ಸಹಯೋಗದೊಂದಿಗೆ ನಿರ್ಮಿಸಿರುವ ಮೊಬೈಲ್ ರಕ್ತದಾನದ ಬಸ್‍ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು. ವಿಧಾನಸೌಧ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಾರ್ಗೊ ಸೇವೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಕೋವಿಡ್‍ನಿಂದಾಗಿ ಸಾರಿಗೆ ಸಂಸ್ಥೆಗಳು ತೀವ್ರ ಸಂಕಷ್ಟದಲ್ಲಿದ್ದು, ಪರ್ಯಾಯ ಮಾರ್ಗದ ಆದಾಯವನ್ನು ಕಂಡುಕೊಂಡಿರುವುದು ಸಮಯೋಚಿತವಾಗಿದೆ ಎಂದು ಹೇಳಿದರು. ರಾಜ್ಯದ ಕೆಎಸ್‍ಆರ್‍ಟಿಸಿ ವಾಯುವ್ಯ ಹಾಗೂ ಈಶಾನ್ಯ ಸಾರಿಗೆ ಸಂಸ್ಥೆಗಳು ಪ್ರತಿದಿನ 51 ಲಕ್ಷ ಕಿ.ಮೀ […]

CBSE ವಿದ್ಯಾರ್ಥಿಗಳ ಗಮನಕ್ಕೆ : 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಕ್ರಮ ಕಡಿತ ಮಾಡಿಲ್ಲ : ಸ್ಪಷ್ಟನೆ ನೀಡಿದ ಮಂಡಳಿ

ನವದೆಹಲಿ : ವದಂತಿಗಳನ್ನು ತಳ್ಳಿ ಹಾಕಿರುವ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ಇ) ಮುಂಬರುವ 10ನೇ ತರಗತಿ ಯ ಬೋರ್ಡ್ ಪರೀಕ್ಷೆಗಳಿಗೆ ಸಮಾಜ ವಿಜ್ಞಾನದ ಸಿಲೆಬಸ್ ಕಡಿಮೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ. ಎರಡು ದಿನಗಳ ಹಿಂದೆ ವಿವಿಧ ವೆಬ್ ಪೋರ್ಟಲ್ ಗಳು ಸಾಮಾಜಿಕ ವಿಜ್ಞಾನ ವಿಷಯಗಳ ಥಿಯರಿಯಲಿ ಒಟ್ಟು ಐದು ಘಟಕಗಳನ್ನು ತೆಗೆದುಹಾಕಲಾಗಿದೆ ಎಂದು ವರದಿ ಮಾಡಿದ್ದವು. ಆದರೆ, ಈ ಬಗ್ಗೆ ಸದ್ಯಕ್ಕೆ ಯಾವುದೇ ಘೋಷಣೆ ಮಾಡಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ. ’10ನೇ ತರಗತಿಯ ಸಮಾಜ […]

ಕೋವಿಡ್ ಗಂಡಸರಿಗೆ ಹೆಚ್ಚು ಮಾರಕವೇಕೆ?

ಕೊಳ್ಳೇಗಾಲ ಶರ್ಮ ಬಹುಶಃ ಬೇರೆಲ್ಲಾ ವಿಷಯದಲ್ಲಿಯೂ ಮಹಿಳೆಯರನ್ನು ಅಬಲರೆನ್ನಬಹುದು. ಅದರೆ ಕೋವಿಡ್‌ ವಿಷಯದಲ್ಲಿ ಬಂದಾಗ ಮಹಿಳೆಯರೇ ಸಬಲರು. ಆ ಸೋಂಕಿನಿಂದ ಗೆದ್ದು ಬರುವವರಲ್ಲಿ ಅವರೇ ಹೆಚ್ಚಂತೆ. ಇದು ಅವರಿಗೆ ನಿಸರ್ಗ ಇತ್ತ ವರವಿಬಹುದು. ಏಕೆಂದರೆ ಗಂಡಸರು ಹಾಗೂ ಹೆಂಗಸರ ರೋಗಪ್ರತಿರೋಧಕತೆಯಲ್ಲಿ ನಿರ್ಣಾಯಕವಾದ ವ್ಯತ್ಯಾಸಗಳಿವೆ ಎಂಬ ಸುದ್ದಿಯನ್ನು ಮೊನ್ನೆ ಸೈನ್ಸ್‌ ಪತ್ರಿಕೆ ವರದಿ ಮಾಡಿದೆ. ರೋಗಪ್ರತಿರೋಧಕತೆಯಲ್ಲಿ ಹೀಗೊಂದು ಲಿಂಗಭೇದ ಸ್ಪಷ್ಟವಾಗಿದೆ ಎಂದು ಅಮೆರಿಕೆಯ ಯೇಲ್‌ ವಿಶ್ವವಿದ್ಯಾನಿಲಯದ ವೈದ್ಯ ವಿಜ್ಞಾನಿಗಳಾದ ಅಕಿಕೋ ಇವಸಾಕಿ ಮತ್ತು ತಕೆಹಿರೊ ತಕಹಾಶಿ ವರದಿ ಮಾಡಿದ್ದಾರೆ. […]

8.51 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ: ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 8.51 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ನಗರದ ಸಮಗ್ರ ಶಿಕ್ಷಣ ಕಚೇರಿಯಲ್ಲಿ 2020ರ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಯಶೋಗಾಥೆ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೋವಿಡ್-19 ನಡುವೆಯೇ ದೇಶಕ್ಕೆ ಮಾದರಿಯಾಗುವಂತೆ ಪರೀಕ್ಷೆ ನಡೆಸಿದ್ದೇವೆ. ಈ ವರ್ಷದ ಪರೀಕ್ಷೆ ಇನ್ನು ಉತ್ಕೃಷ್ಟ ರೀತಿಯಲ್ಲಿ ನಡೆಸುವ ಸವಾಲು ನಮ್ಮ ಮುಂದಿದೆ ಎಂದರು. 2021ರ ಎಸ್‌ಎಸ್‌ಎಲ್ ಸಿ […]

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ : ಓರ್ವ ಆರೋಪಿಯ ಬಂಧನ

ಚಿಕ್ಕಬಳ್ಳಾಪುರ: ರಾಜ್ಯವನ್ನು ಮತ್ತೆ ಬೆಚ್ಚಿ ಬೀಳಿಸಿದ ಚಿಕ್ಕಬಳ್ಳಾಪುರ ಹೀರೆನಾಗವೇಲಿ ಸಮೀಪದ ಕಲ್ಲುಕ್ವಾರಿ ಬಳಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ವಸ್ತುಗಳನ್ನು ಸಾಗಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೌರಿಬಿದನೂರು ಮೂಲದ ಗಂಗೋಜಿ ರಾವ್ ಬಂಧಿತ ಆರೋಪಿ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಸ್ಫೋಟಕಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ಸದ್ಯ, ಸ್ಫೋಟಕ ವಸ್ತುಗಳನ್ನು ಸಾಗಿಸಿದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಾಗೇಪಲ್ಲಿ ಮೂಲದ ನಾಗರಾಜ್ ರೆಡ್ಡಿ, ಆಂಧ್ರಪ್ರದೇಶದ ರಾಘವೇಂದ್ರ ರೆಡ್ಡಿ ಹಾಗೂ ಶಿವರೆಡ್ಡಿ ಬ್ರಹ್ಮವರ್ಷಿಣಿ ಕ್ರಶರ್​ ಮಾಲೀಕರೆಂದು ತಿಳಿದುಬಂದಿದೆ

ಉತ್ತರಾಖಂಡ್‌ ಹಿಮನದಿ ದುರಂತ: ನಾಪತ್ತೆಯಾದ 136 ಮಂದಿಯೂ ಮೃತಪಟ್ಟಿದ್ದಾರೆ- ಅಧಿಕಾರಗಳಿಂದ ಸ್ಪಷ್ಟನೆ..!

ಉತ್ತರಾಖಂಡ: ಈ ತಿಂಗಳ ಆರಂಭದಲ್ಲಿ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಸ್ಫೋಟಗೊಂಡ ಪರಿಣಾಮ 136 ಜನ ಕಣ್ಮರೆಯಾಗಿದ್ದು, ಆ 136 ಮಂದಿಯೂ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧೌಲಿಗಂಗಾ-ಅಲಕಾನಂದ ನದಿ ವ್ಯವಸ್ಥೆಯಲ್ಲಿ ಹಿಮಪ್ರವಾಹ ಮತ್ತು ಹಿಮಪಾತಕ್ಕೆ ಕಾರಣವಾದ ಹಿಮಾಲಯದ ಮೇಲಿನ ಹಿಮನದಿ ಸ್ಫೋಟಗೊಂಡು ಜಲವಿದ್ಯುತ್ ಸ್ಥಾವರ ಮತ್ತು ಐದು ಸೇತುವೆಗಳು ಕೊಚ್ಚಿ ಹೋಗಿದ್ದು, ಮತ್ತೊಂದು ವಿದ್ಯುತ್ ಯೋಜನೆಗೆ ತೀವ್ರ ಹಾನಿಯುಂಟಾಗಿದೆ. ಜಿಲ್ಲೆ ದುರಂತಕ್ಕೆ ಬಲಿಯಾದ ನಂತರ ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ಸ್ಪಂದನಾ ತಂಡಗಳು, ಸಶಸ್ತ್ರ ಪಡೆಗಳು, […]

ಕಲ್ಯಾಣ ಕರ್ನಾಟಕಕ್ಕೆ 10 ಸಾವಿರ ಶಿಕ್ಷಕರ ನೇಮಕಕ್ಕೆ ಪ್ರಸ್ತಾಪ:ಎಸ್. ಸುರೇಶ್ ಕುಮಾರ್

ಬೆಂಗಳೂರು ಫೆ,19: ನಂಜುಂಡಪ್ಪ ವರದಿಯಂತೆ ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ವಿಶೇಷ ಶೈಕ್ಷಣಿಕ ವಲಯಗಳನ್ನು ಸ್ಥಾಪಿಸಿ ಅಭಿವೃದ್ಧಿಗೊಳಿಸಲು ಮತ್ತು ಆ ಭಾಗದ ಶಾಲೆಗಳಿಗೆ 10 ಸಾವಿರ ಶಿಕ್ಷಕರ ನೇಮಕಕ್ಕೆ 2021-22ನೇ ಸಾಲಿನ ಬಜೆಟ್‍ನಲ್ಲಿ ಅವಕಾಶ ಕಲ್ಪಿಸಬೇಕೆಂದು ಮುಖ್ಯಮಂತ್ರಿಯವರನ್ನು ಕೋರಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಸಂಬಂಧ ಅವಶ್ಯ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು. […]

ಹಳೆ ವಾಹನಗಳಿನ್ನು ಬೆಂಗಳೂರು ರಸ್ತೆಗಿಳಿಯುವಂತಿಲ್ಲ

ಹಳೆ ವಾಹನಗಳನ್ನು ಗುಜರಿಗೆ ಹಾಕಲು ರೂಲ್ಸ್   ಬೆಂಗಳೂರು: ನಿಮ್ಮ ಬಳಿ ಹಳೆ ವಾಹನಗಳಿದ್ದರೆ ಅವು ಇನ್ಮುಂದೆ ರಸ್ತೆಗಿಳಿಯುವಂತಿಲ್ಲ.  ಹಳೆ ವಾಹನಗಳ‌ ಸಂಚಾರಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.  ವಾಯುಮಾಲಿನ್ಯ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ಹಳೆ ವಾಹನಗಳನ್ನು ಗುಜರಿಗೆ ಹಾಕಲು ಸರ್ಕಾರ ರೂಲ್ಸ್ ತರುತ್ತಿದೆ. ಬೆಂಗಳೂರಿನಲ್ಲಿ ಹಳೆ ವಾಹನಗಳನ್ನು ಬ್ಯಾನ್ ಮಾಡಲು ಯೋಜನೆ ರೂಪಿಸಲಾಗಿದೆ.  ಬೆಂಗಳೂರಿನಲ್ಲಿ ಸದ್ಯದಲ್ಲೇ ಗುಜರಿ ಸೇರಲಿವೆ ಲಕ್ಷಾಂತರ ವಾಹನಗಳು ಹಳೆ ವಾಹನಗಳ ಬ್ಯಾನ್ ಮಾಡುವ […]

Back To Top