ಕನ್ನಡ ವಿದ್ವಾಂಸ, ಭಾಷಾ ವಿಜ್ಞಾನಿ, ವಿಮರ್ಶಕ ಪ್ರೊ.ಕೆವಿ ನಾರಾಯಣ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿ ಲಭಿಸಿದೆ.
ಅವರ ‘ನುಡಿಗಳ ಅಳಿವು’ ಎಂಬ ಸಾಹಿತ್ಯ ವಿಮರ್ಶೆ ಕೃತಿಗೆ ಈ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿ 1 ಲಕ್ಷ ನಗದು ಹಾಗೂ ಪ್ರಶಸ್ತಿಪತ್ರವನ್ನು ಒಳಗೊಂಡಿದೆ.
ಕೆವಿ ನಾರಾಯಣ ಸೇರಿದಂತೆ 21 ಭಾಷೆಗಳ ಲೇಖಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆ ತಿಳಿಸಿದೆ.
ಕನ್ನಡ ವಿಭಾಗದ ಆಯ್ಕೆ ಸಮಿತಿಯಲ್ಲಿ ಓಎಲ್ ನಾಗಭೂಷಣಸ್ವಾಮಿ, ಡಾ.ಹಳೆಮನಿ ನಾಗರಾಜ್ ಮತ್ತು ಡಾ.ಸರಜೂ ಕಾಟ್ಕರ್ ಇದ್ದರು.
ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 8ರಂದು ನವದೆಹಲಿಯಲ್ಲಿ ನಡೆಯಲಿದೆ.