Category: ಕೃಷಿ ಗ್ರಾಮಾಭಿವೃದ್ಧಿ

ಮಾರುಕಟ್ಟೆಗೆ ಲಾಕ್‌ಡೌನ್ ಅಡಚಣೆ: ಬೆಳೆದ ಬಾಳೆ ಕಡಿದ ರೈತ

ಯಲ್ಲಾಪುರ: ಲಾಕ್‌ಡೌನ್ ಕಾರಣದಿಂದ ಬಾಳೆಕಾಯಿಗೂ ಮಾರುಕಟ್ಟೆ ಕುಸಿದಿದೆ. ಇದರಿಂದ ಚಿಂತಿತರಾದ ತಾಲ್ಲೂಕಿನ ಗ್ರಾಮೀಣ ಪ್ರದೇಶದ ರೈತರು ಬಾಳೆ ಗೊನೆ, ಬಾಳೆ ಗಿಡಗಳನ್ನು ಕತ್ತರಿಸಿ ಹಾಕುತ್ತಿದ್ದಾರೆ. ತಾಲ್ಲೂಕು ಅಡಿಕೆಗೆ ಎಷ್ಟು ಪ್ರಖ್ಯಾತವೋ ಬಾಳೆ ಕೃಷಿಗೂ ಅಷ್ಟೇ ಪ್ರಸಿದ್ಧವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಪ‍್ರವಾಸಿಗರು ಪಟ್ಟಣದಲ್ಲಿ ಬಾಳೆಹಣ್ಣುಗಳನ್ನು ಖರೀದಿಸಿ ಮುಂದೆ ಸಾಗುತ್ತಾರೆ. ಆದರೆ, ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಜಾರಿಯಾದ ಬಳಿಕ ಬಾಳೆ ಬೆಳೆಗಾರರ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಬಾಳೆಹಣ್ಣುಗಳನ್ನು ಬಹಳ ದಿನ ಶೇಖರಿಸಿ ಇಡಲಾಗದು. ಹಣ್ಣಾದ ನಂತರ ಅವುಗಳನ್ನು ಮಾರಾಟ ಮಾಡದಿದ್ದರೆ […]

ಹಳದಿ ರೋಗಕ್ಕೆ ಹಾಳಾದ ಅಡಿಕೆ ಬೆಳೆಗಾರರ ಬದುಕು

ಸುಳ್ಯ: ಕರಾವಳಿ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆ ಈಗ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಅದರಲ್ಲೂ ಇದೀಗ ವ್ಯಾಪಕವಾಗಿರುವ ಹಳದಿ ಎಲೆ ರೋಗ ಅಡಿಕೆಗೆ ಕಂಟಕಪ್ರಾಯವಾಗಿ ಪರಿಣಮಿಸಿದೆ. ದ.ಕ. ಜಿಲ್ಲೆಯಲ್ಲಿ ಸಾವಿರಾರೂ ಎಕರೆ ಅಡಿಕೆ ಕೃಷಿ ಹಳದಿ ಎಲೆ ರೋಗಕ್ಕೆ ತುತ್ತಾಗಿದೆ. ಜಿಲ್ಲೆಯ ಸುಳ್ಯ ತಾಲೂಕೊಂದರಲ್ಲೇ ಸಾವಿರಾರು ಎಕರೆ ಅಡಿಕೆ ಕೃಷಿ ಈ ರೋಗ ಬಾಧೆಯಿಂದ ತತ್ತರಿಸಿದೆ. ಇದರಿಂದ ಸಾವಿರಾರು ಕೃಷಿಕರು ಕಂಗಾಲಾಗಿದ್ದಾರೆ. 25-30 ವರ್ಷಗಳ ಹಿಂದೆ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ಕಾಣಿಸಿಕೊಂಡ ಈ ಹಳದಿ ಎಲೆ […]

ಬಮೂಲ್ ನಿಂದ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಣೆ

ಇಂದು ಚನ್ನಪಟ್ಟಣ ಬಮೂಲ್ ಶಿಬಿರ ಕಚೇರಿಯಲ್ಲಿ ಬಮೂಲ್ ನಿರ್ದೇಶಕರಾದ ಹೆಚ್.ಸಿ. ಜಯಮುತ್ತು ರವರು 1.62.000  ರೂಪಾಯಿಗಳ ಸದಸ್ಯರ ಮರಣದ ಚೆಕ್ ಗಳು ಮಾದರಿ ಹಸು ಕೊಟ್ಟಿಗೆಯ ಚೆಕ್ಕಗಳು ಸದಸ್ಯರ ವೈದ್ಯಕೀಯ ಮರುಪಾವತಿಯ ಚೆಕ್ ಗಳನ್ನು ವಿವಿಧ ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪ ವ್ಯವಸ್ಥಾಪಕರಾದ ಡಾ: ಕೆಂಪರಾಜು ರವರು ಮುಖ್ಯ ಕಾರ್ಯನಿರ್ವಾಹಕರ ಗಳಾದ ರಾಜು. ಚೆನ್ನಪ್ಪ. ರವಿಕುಮಾರ್. ಶಿವಲಿಂಗು. ಸಿದ್ದಲಿಂಗರಾಜೇ ಅರಸ್. ನೀತೀನ್. ಹಾಗೂ ಫಲಾನುಭವಿಗಳು ಹಾಜರಿದ್ದರು.  

ಬಮೂಲ್ ನಿಂದ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ಚೆಕ್ ವಿತರಣೆ

ದೊಡ್ಡಮಳೂರಿನ ಶ್ರೀರಾಮಮಂದಿರ ದೇವಸ್ಥಾನದ ಆವರಣದಲ್ಲಿ ಬಮೂಲ್ ನಿರ್ದೇಶಕರಾದ ಎಚ್.ಸಿ. ಜಯಮುತ್ತು ರವರ ನೇತೃತ್ವದಲ್ಲಿ ಚನ್ನಪಟ್ಟಣ ತಾಲ್ಲೂಕು ಹಾಲು ಉತ್ಪಾದಕರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಗೆ ಸನ್ಮಾನ ಹಾಗೂ ನಿವೃತ್ತಿ ಹೊಂದಿದ ಮುಖ್ಯ ಕಾರ್ಯನಿರ್ವಾಹಕರಿಗೆ ಸನ್ಮಾನ ಮತ್ತು ಅಕಾಲಿಕವಾಗಿ ಮರಣ ಹೊಂದಿದ ಸಿಬ್ಬಂದಿಯ ಕುಟುಂಬಗಳಿಗೆ ಪರಿಹಾರದ ಚೆಕ್ಕುಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಹಾಲು ಉತ್ಪಾದಕರ ನೌಕರರ  ಕ್ಷೇಮಭಿವೃದ್ಧಿ  ಸಂಘದ ಅಧ್ಯಕ್ಷರಾದ ಪುಟ್ಟೇಗೌಡ ರವರು. ಪದಾಧಿಕಾರಿಗಳಾದ ಪುಟ್ಟರಾಜು ಹೊಂಗನೂರು. ದೇವರಾಜು ತಗಚಗೆರೆ. ಕೆ.ಟಿ. ಲಕ್ಷ್ಮಮ್ಮ. ಬಿಳಿಗೌಡ. ಮಾಧು […]

ಮಲೆನಾಡಿನ ಕಾಫಿ ಬೆಳೆಗಾರ ಸೋತದ್ದೆಲ್ಲಿ ಮತ್ತು ಬೆಲೆಗಳ ಮೇಲೆ ಸರ್ಕಾರಿ ನಿಯಂತ್ರಣ ಯಾಕೆ ಬೇಕು?

ಒಂದು ಕಾಲಕ್ಕೆ ಅತ್ಯಂತ ಪ್ರತಿಷ್ಟಿತ ಹಾಗೂ ಸಧೃಡ ಕೃಷಿಯೆಂದು ಹೆಮ್ಮೆ ಪಡುತ್ತಿದ್ದ  ಕಾಫಿ ಬೆಳೆಗಾರರೆಂದರೆ ಐಷಾರಾಮೀ ದೊರೆಗಳೆಂದು ಬೇರೆಯವರು ಹೇಳುತ್ತಿದ್ದ  ಮಲೆನಾಡಿನ ಕಾಫಿ ಬೆಳೆ ಸೋತದ್ದೆಲ್ಲಿ. ಸುಮಾರಾಗಿ ಎಂಬತ್ತರ ದಶಕದವರೆಗೂ ಕಾಫಿಯ ಸ್ಥಿತಿ ಹಾಗೇ ಇತ್ತು. ಆಂತರಿಕ ಬಳಕೆ ಬಹಳ ಕಡಿಮೆ ಇದ್ದು ಅದು ವರ್ಷಕ್ಕೆ ಐವತ್ತು ಸಾವಿರ ಟನ್ ಮೀರುತ್ತಿರಲಿಲ್ಲ. ಅದರಲ್ಲೂ ತಮಿಳುನಾಡೇ ಮುಖ್ಯ ಗ್ರಾಹಕ ರಾಜ್ಯವಾಗಿತ್ತು. ಉಳಿದ ಎಲ್ಲಾ ಕಾಫಿ ರಫ್ತಾಗುತ್ತಿತ್ತು. ಅಂದಿನ ಕಾಲಕ್ಕೆ ದೊಡ್ಡ ಮೊತ್ತವೆನ್ನಬಹುದಾದ ನಾಲ್ಕು ನೂರು ಕೋಟಿ ರುಪಾಯಿಯಷ್ಟು ವಿದೇಶೀ […]

ಗ್ರಾಮಪಂಚಾಯ್ತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ

ಗ್ರಾಮಪಂಚಾಯ್ತಿಗಳ  ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಪ್ರಕಟಗೊಂಡು  ಗ್ರಾಮ ಪಂಚಾಯ್ತಿಗಳಲ್ಲಿ  ಹಲವಾರು ರೀತಿಯ ವಿಧ್ಯಮಾನಗಳು ನಡೆದು ಅಂತಿಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆಯುತ್ತಿವೆ.

ಸಹಕಾರ ಶಿಕ್ಷಣ ನಿಧಿಗೆ 4 ಲಕ್ಷ ರೂ ಚೆಕ್ ವಿತರಣೆ

ಚನ್ನಪಟ್ಟಣ ಶಿಬಿರ ಕಚೇರಿಯಲ್ಲಿ ಬಮುಲ್ ನಿರ್ದೇಶಕರಾದ ಹೆಚ್.ಸಿ. ಜಯಮುತ್ತು ರವರು ಚನ್ನಪಟ್ಟಣ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ಸಹಕಾರ ಶಿಕ್ಷಣ ನಿಧಿಗೆ 4 ಲಕ್ಷ ರೂಪಾಯಿಗಳ ಚೆಕ್ಕನ್ನು ರಾಮನಗರ ಜಿಲ್ಲಾ ಸಹಕಾರ ಸಂಘಗಳ ಒಕ್ಕೂಟದ  ಅಧ್ಯಕ್ಷರಾದ ಸಿಂ.ಲಿಂ. ನಾಗರಾಜು ರವರಿಗೆ ನೀಡಿದರು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಕುಕ್ಕೂರುದೊಡ್ಡಿ ಜಯರಾಮು ರವರು ಉಪ ವ್ಯವಸ್ಥಾಪಕರಾದ ಡಾ. ಕೆಂಪರಾಜು ರವರು. ಹಾಗೂ ಮುಖಂಡರು ಉಪಸ್ಥಿತರಿದ್ದರು.

ಅನರ್ಹರಿಗೂ ಕಿಸಾನ್ ಸಮ್ಮಾನ್!

ಸರ್ಕಾರದ ಹಣ ಸೋರಿಕೆಯಾಗುವುದು, ಅಪಾತ್ರರಿಗೆ ಸಂದಾಯ ಆಗುವುದು ಆಶ್ರ‍್ಯಪಡಬೇಕಾದ ವಿಷಯವೇನಲ್ಲ. ಸೋರಿಕೆಯ ಇನ್ನೊಂದು ಪ್ರಕರಣದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ(ಪಿಎಂಕೆವೈ)ಯಡಿ 20.48 ಲಕ್ಷ ಅನರ್ಹರಿಗೆ 1,364.12 ಕೋಟಿ ರೂ. ಪ್ರೋತ್ಸಾಹಧನ ಪಾವತಿ ಮಾಡಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರಿಗೆ ಮೂರು ಕಂತುಗಳಲ್ಲಿ ವಾರ್ಷಿಕ 6,000 ರೂ. ಪ್ರೋತ್ಸಾಹಧನ ನೀಡುವ ಈ ಮಹತ್ವಾಕಾಂಕ್ಷಿ ಯೋಜನೆಗೆ 2019ರಲ್ಲಿ ಚಾಲನೆ ನೀಡಲಾಗಿದೆ. ಕಾಮನ್‌ವೆಲ್ತ್‌ ಹ್ಯೂಮನ್‌ ರೈಟ್ಸ್‌ ಇನಿಷಿಯೇಟಿವ್‌  ವೆಂಕಟೇಶ ನಾಯಕ್ ಎಂಬುವರು ಯೋಜನೆ ಕುರಿತು ಮಾಹಿತಿ ಕೋರಿ, ಆರ್‌ಟಿಐ […]

ತೋಟಗಾರಿಕೆ ಮೇಳ ಫೆ.8 ರಿಂದ 

ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಆವರಣದಲ್ಲಿ ಫೆ.8ರಿಂದ 12ರವರೆಗೆ  ರಾಷ್ಟ್ರೀಯ ತೋಟಗಾರಿಕೆ ಮೇಳ ನಡೆಯಲಿದ್ದು, ನೋಂದಣಿ ಮಾಡಿಕೊಂಡವರಿಗೆ ಮಾತ್ರ ಪ್ರವೇಶ ಇರಲಿದೆ ಎಂದು ಐಐಎಚ್‌ಆರ್ ನಿರ್ದೇಶಕ ಎಂ.ಆರ್.ದಿನೇಶ್ ತಿಳಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಭೌತಿಕ ಹಾಗೂ ಆನ್‌ಲೈನ್ ಮೂಲಕ ಮೇಳ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. 30 ಸಾವಿರ ರೈತರಿಗೆ ಪ್ರವೇಶ ಕಲ್ಪಿಸಲು ನಿರ್ಧರಿಸಲಾಗಿದೆ.  ಪ್ರತಿದಿನ ಆರು ಸಾವಿರ ನೋಂದಾಯಿತ ರೈತರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಎರಡು ಅವಧಿಗಳಲ್ಲಿ ಮೇಳ ವೀಕ್ಷಿಸಬಹುದು. […]

Back To Top