Category: ಪರಿಸರ ಜೀವಿಶಾಸ್ತ್ರ

ಬೆಂಗಳೂರು ಕೆರೆಗಳ ಅಭಿವೃದ್ಧಿ ಸಮಿತಿ: ಎನ್‌ಜಿಟಿ

ಬೆಳ್ಳಂದೂರು, ಅಗರ ಮತ್ತು ವರ್ತೂರು ಕೆರೆಗಳ ಪುನಶ್ಚೇತನ ಕಾರ್ಯಕ್ಕೆ ಸಂಬAಧಿಸಿದ ಸಮಸ್ಯೆಗಳನ್ನು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ನೇತೃತ್ವದ ಮೇಲ್ವಿಚಾರಣೆ  ಸಮಿತಿಯ ಗಮನಕ್ಕೆ ತರಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) ಸೂಚಿಸಿದೆ. ಬೆಳ್ಳಂದೂರು, ಅಗರ ಮತ್ತು ವರ್ತೂರು ಕೆರೆಗಳಿಗೆ ತ್ಯಾಜ್ಯ ಹರಿಯುವಿಕೆ ಹಾಗೂ ಕೆರೆಗಳ ಸಮೀಪ ಘನತ್ಯಾಜ್ಯ ವಿಲೇವಾರಿಗೆ ಕಡಿವಾಣ ಹಾಕಬೇಕು. ಜಲಾನಯನ ಪ್ರದೇಶದ ಅತಿಕ್ರಮಣವನ್ನು ತಡೆಯಬೇಕು. ಕೆರೆಗಳ ಅಭಿವೃದ್ಧಿಗೆ ಸೂಕ್ತ […]

Delhi: Chilly winter morning, light showers

Light rains shower in the pockets of the national capital on Saturday morning which brought down the temperature even further adding to the biting cold prevailing over North India. According to the India Meteorological Department (IMD), the impact of Western Disturbance has begun over Northwest India including Delhi. Palam has reported 0.4 mm rainfall. Ridge, […]

ಜೈವಿಕ ತಾಣವಾಗಿ ರೋರಿಚ್‌ಎಸ್ಟೇಟ್: ಶಿಫಾರಸು

ಕನಕಪುರ ರಸ್ತೆಯಲ್ಲಿರುವ ದೇವಿಕಾರಾಣಿ-ರೋರಿಚ್‌ಎಸ್ಟೇಟ್‌ನ್ನು ಪಾರಂಪರಿಕ ಜೈವಿಕ ತಾಣವೆಂದು ಘೋಷಿಸಬೇಕು ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ಶಿಫಾರಸು ಮಾಡಿದೆ. ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ, ತಜ್ಞರು ಹಾಗೂ ಅರಣ್ಯಾಧಿಕಾರಿಗಳನ್ನು ಒಳಗೊಂಡ ತಂಡ ಡಿ.24 ರಂದು ಎಸ್ಟೇಟ್‌ಗೆ ಭೇಟಿ ನೀಡಿ, ಪರಿಸರ, ಜೀವವೈವಿಧ್ಯ ಕುರಿತು ಸಮೀಕ್ಷೆ ನಡೆಸಿ, ಸಿದ್ಧಪಡಿಸಿದ ವರದಿಯನ್ನು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರಿಗೆ ಸಲ್ಲಿಸಲಾಗಿದೆÀ. ದೇವಿಕಾರಾಣಿ-ರೋರಿಚ್ ಎಸ್ಟೇಟ್ ರಾಜಧಾನಿಯ ಅದ್ಭುತ ಜೈವಿಕ ಭಂಡಾರವಾಗಿದ್ದು, 2002ರ ಜೀವವೈವಿಧ್ಯ ಕಾಯ್ದೆ ಅಡಿಯಲ್ಲಿ ಪಾರಂಪರಿಕ ತಾಣ ಎಂದು […]

ಹುಲಿ ಸಂರಕ್ಷಣೆ ಉದ್ಯಾನಗಳಿಗೆ ಹೈಟೆಕ್ ಸ್ಪರ್ಶ

ರಾಜ್ಯದ ಹುಲಿ ಸಂರಕ್ಷಣೆ ಉದ್ಯಾನಗಳಿಗೆ ಹೈಟೆಕ್ ಸ್ಪರ್ಶ ನೀಡಲಾಗುವುದು. ತಂತ್ರಜ್ಞಾನ ಬಳಸಿ ಅಭಿವೃದ್ಧಿ ಪಡಿಸಲಾಗುವುದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ಹುಲಿ ಸಂರಕ್ಷಣಾ ಪ್ರತಿಷ್ಠಾನದ ಆಡಳಿತ ಮಂಡಳಿಯ 11ನೇ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಹುಲಿಗಳ ಸಂಖ್ಯೆಯಲ್ಲಿ ರಾಜ್ಯ ಮೂರನೇ ಸ್ಥಾನ ಪಡೆದುಕೊಂಡಿದೆ. ಹುಲಿಗಳನ್ನು ಸಂರಕ್ಷಿಸಿ, ಅವುಗಳ ಸಂತತಿಯನ್ನು ಉಳಿಸಬೇಕು. ನಾಗರಹೊಳೆ ಹುಲಿ ಸಂರಕ್ಷಣಾ ಪ್ರತಿಷ್ಠಾನವು ಹುಲಿಗಳಿಂದ ಹಸುಗಳನ್ನು ರಕ್ಷಿಸಲು ಸುರಕ್ಷಿತ ಶೆಡ್ ನಿರ್ಮಾಣ ಮಾಡಿದೆ. ಇದನ್ನು ದುರುಪಯೋಗ ಪಡಿಸಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು […]

ಸುಸ್ಥಿರ ಕರಾವಳಿ: ಬ್ಲೂ ಫ್ಲ್ಯಾಗ್ ಅನಾವರಣ

ಹೊನ್ನಾವರ ತಾಲೂಕಿನ ಕಾಸರಕೋಡು ಸೇರಿದಂತೆ ದೇಶದ ಎಂಟು ಕಡಲ ತೀರಗಳಲ್ಲಿ ಪ್ರತಿಷ್ಠಿತ ಬ್ಲೂಫ್ಲ್ಯಾಗ್‌ನ್ನು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ ಜಾವಡೇಕರ್ ಅನಾವರಣಗೊಳಿಸಿದರು. ಮುಂಬರುವ 3-4 ವರ್ಷಗಳಲ್ಲಿ ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ಅನುಗುಣವಾಗಿ ಅಭಿವೃದ್ಧಿಪಡಿಸಲು 100 ಕಡಲ ತೀರಗಳನ್ನು ಗುರುತಿಸಲಾಗಿದೆ. ಮೊದಲ ಹಂತದಲ್ಲಿ ಎಂಟು ಕಡಲತೀರಗಳಲ್ಲಿ ಬ್ಲೂಫ್ಲ್ಯಾಗ್ ಅನಾವರಣಗೊಳಿಸಲಾಗಿದೆ ಎಂದು ವರ್ಚುವಲ್ ಕಾರ್ಯಕ್ರಮದಲ್ಲಿ ಹೇಳಿದರು. ಕಡಲತೀರದ ಗುಣಮಟ್ಟ ಕಾಪಾಡಲು ಕೈಗೊಂಡ ಕ್ರಮಗಳು ಮತ್ತು ಸುಸ್ಥಿರ ಅಭಿವೃದ್ಧಿ ಉಪಕ್ರಮಗಳಿಗೆ ಅಂತರರಾಷ್ಟ್ರೀಯ ಮನ್ನಣೆ ಸಂದಿದೆ. ಪ್ರವಾಸೋದ್ಯಮಕ್ಕೆ ಪೂರಕವಾಗಿ […]

ಕಸ್ತೂರಿರಂಗನ್ ವರದಿಗೆ ವಿರೋಧ

ಪಶ್ಚಿಮ ಘಟ್ಟಕ್ಕೆ ಸಂಬಂಧಿಸಿದಂತೆ ಡಾ.ಕೆ.ಕಸ್ತೂರಿ ರಂಗನ್ ವರದಿಯನ್ನು ಈಗಿರುವ ಸ್ಥಿತಿಯಲ್ಲಿ ಜಾರಿಗೊಳಿಸದಂತೆ ಆಗ್ರಹಿಸಿ, ಅರಣ್ಯ ಸಚಿವ ಆನಂದ್ ಸಿಂಗ್ ಅಧ್ಯಕ್ಷತೆಯ ಸಚಿವ ಸಂಪುಟ ಉಪ ಸಮಿತಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಿದೆ. ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ, ಕಸ್ತೂರಿ ರಂಗನ್ ವರದಿ ವಿರೋಧಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ವರದಿಯನ್ನು ಯಥಾವತ್  ಜಾರಿ ಮಾಡದಂತೆ ಆಗ್ರಹಿಸಿ ಕೇಂದ್ರ ಪತ್ರ ಬರೆಯಲಾಗುತ್ತದೆ ಎಂದರು. ಡಿ.೩೧ರಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಲ್ಲಿ ಪ್ರಕರಣ ವಿಚಾರಣೆಗೆ […]

ರಾಜ್ಯದಲ್ಲಿ ಮೈ ಕೊರೆಯಲಿರುವ ಮಾಗಿ ಚಳಿ

ರಾಜ್ಯದಲ್ಲಿ ಹಿಂಗಾರು ಮಳೆ ಪ್ರಮಾಣ ಇಳಿಮುಖವಾಗುತ್ತಿದ್ದಂತೆ ಚಳಿಯ ಪ್ರಮಾಣ ಹೆಚ್ಚಳವಾಗಿದೆ. ಮಾಗಿ ಚಳಿ ಸಂಕ್ರಾAತಿವರೆಗೂ ಕಂಡುಬರಲಿದೆ. ಬಹಳಷ್ಟು ಕಡೆ ಬೆಳಗಿನ ವೇಳೆ ಮಂಜು ಮುಸುಕಿದ ವಾತಾವರಣ ಸಾಮಾನ್ಯವಾಗಿದೆ. ರಾಜ್ಯದಲ್ಲಿ ಗಾಳಿಯ ವೇಗ ಬಹಳ ಕಡಿಮೆಯಿದ್ದು ಚಳಿಯು ಹೆಚ್ಚಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು. ರಾಜ್ಯದಲ್ಲಿ ಸರಾಸರಿ 70ರಷ್ಟು ಆರ್ದ್ರತೆ ಇದ್ದು, ಗಾಳಿಯ ವೇಗ ಪ್ರತಿ ಗಂಟೆಗೆ ಸೊನ್ನೆಯಿಂದ ಒಂದೂವರೆ ಕಿ.ಮೀ ನಷ್ಟಿದೆ. ಕೆಲವೆಡೆ 3.5 ಕಿ.ಮೀನಷ್ಟು ಗಾಳಿಯ […]

ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲೆ

ಬೀದರ್‌ನಲ್ಲಿ ಋತುಮಾನದ ಅತಿ ಕಡಿಮೆ ತಾಪಮಾನ ಎನ್ನಲಾದ 5.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. 2019ರ ಜ.೧ರಂದು 6.0 ಡಿಗ್ರಿ ಸೆಲ್ಸಿಯಸ್ ಹಾಗೂ ಕಳೆದ ನವೆಂಬರ್‌ನಲ್ಲಿ 7 ಡಿಗ್ರಿ ಸೆ. ತಾಪಮಾನ ದಾಖಲಾಗಿತ್ತು. ವಿಜಯಪುರದಲ್ಲಿ 9.5, ಧಾರವಾಡ 10.2, ದಾವಣಗೆರೆ, ಹಾವೇರಿ, ಗದಗ, ಬೆಳಗಾವಿ ವಿಮಾನ ನಿಲ್ದಾಣಗಳಲ್ಲಿ 11 ಡಿಗ್ರಿ ಸೆ. ತಾಪಮಾನ ದಾಖಲಾಗಿದೆ. ಉತ್ತರದಿಂದ ಒಣ ಹವೆ, ಶೀತಗಾಳಿ ಬೀಸುತ್ತಿರುವುದು, ಮೋಡರಹಿತ ಆಕಾಶ ಹಾಗೂ ಲಾನಿನೊ ಪ್ರಭಾವದಿಂದ ತಾಪಮಾನ ಇಳಿಕೆಯಾಗುತ್ತಿದೆ. ಮುಂಜಾನೆಯಿಂದಲೇ ದಟ್ಟ ಮಂಜು ಆವರಿಸುತ್ತಿದ್ದು, ಚಳಿ […]

ಯಂಗ್ ಚಾಂಪಿಯನ್ಸ್ ಆಫ್ ಅರ್ಥ್ಗೆ ಭಾರತೀಯ

ವಿಶ್ವಸಂಸ್ಥೆಯ ಪರಿಸರ ವಿಭಾಗವು ನೀಡುವ ಪ್ರತಿಷ್ಠಿತ ಯಂಗ್ ಚಾಂಪಿಯನ್ಸ್ ಆಫ್ ದಿ ಅರ್ಥ್–2020 ಪ್ರಶಸ್ತಿಗೆ ಭಾರತದ ನವೋದ್ಯಮಿಯೊಬ್ಬರು ಆಯ್ಕೆಯಾಗಿದ್ದಾರೆ. ಒಟ್ಟು ಏಳು ಜನರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ತಲಾ 7.35 ಲಕ್ಷ ರೂ. ನಗದು ಒಳಗೊಂಡಿದೆ. ಪರಿಸರ ಮಾಲಿನ್ಯ ತಡೆಗೆ  ಪರಿಹಾರ ಕಂಡುಹಿಡಿದವರಿಗೆ ವಿಶ್ವಸಂಸ್ಥೆಯು ಈ ಪ್ರಶಸ್ತಿ ನೀಡುತ್ತಿದೆ. ಸಾಮಾಜಿಕ ಉದ್ಯಮ ತಕಚರ್ ಸಂಸ್ಥಾಪಕ, ಎಂಜಿನಿಯರ್ ಪದವೀಧರ 29 ವರ್ಷದ ವಿದ್ಯುತ್ ಮೋಹನ್ ಪ್ರಶಸ್ತಿಗೆ ಪಾತ್ರರಾದವರು. ಕೃಷಿ ತ್ಯಾಜ್ಯವನ್ನು ಸುಡುವುದರ ಬದಲು ಅದನ್ನು ಇಂಧನ, ಗೊಬ್ಬರ, […]

Back To Top