ಮುಂದಿನ ಶೈಕ್ಷಣಿಕ ವರ್ಷ ಜುಲೈ 15ರಿಂದ ಆರಂಭ – ಶಿಕ್ಷಣ ಸಚಿವ ಸುರೇಶ್ ಕುಮಾರ್
ತುಮಕೂರು : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಶುರುವಾಗಿದೆ. ಇದರಿಂದಾಗಿ ಶೈಕ್ಷಣಿಕ ಚಟುವಟಿಕೆಯ ಮೇಲೆ ಪರಿಣಾಮ ಬೀರಿದೆ. ಇದರ ನಡುವೆಯೂ ಜುಲೈ.15, 2021ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವ ಚಿಂತನೆ ನಡೆದಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊರೋನಾ ಸೋಂಕಿನ ಭೀತಿಯ ನಡುವೆಯೂ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವಂತ ತುರ್ತು ಪರಿಸ್ಥಿತಿ ಬಂದೊಂದಗಿದೆ. ಸದ್ಯಕ್ಕೆ […]
JEE ಮೇನ್ ಪರೀಕ್ಷೆ -2021 : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೇನ್ 2021ರ ನೋಂದಣಿ ಗಡುವನ್ನ ವಿಸ್ತರಿಸಿದ್ದು, ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಅರ್ಜಿ ಸಲ್ಲಿಕೆಯ ವಿಂಡೋ ಮಾರ್ಚ್ 10ರವರೆಗೆ ತೆರೆದಿರುತ್ತದೆ. ಆಕಾಂಕ್ಷಿಗಳು ಅಧಿಕೃತ ವೆಬ್ ಸೈಟ್ʼಗೆ ಭೇಟಿ ನೀಡಿ ನಿಗದಿತ ಅವಧಿಯಲ್ಲಿ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ. ಇನ್ನು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ಮೊದಲು ನೋಂದಾಯಿಸಿಕೊಂಡವರೆಲ್ಲರೂ ಜೆಇಇ ಮೇನ್ 2021 ಅರ್ಜಿ ನಮೂನೆಯಲ್ಲಿ ವಿವರಗಳನ್ನ ಅಧಿಕೃತ ಸೈಟ್ jeemain.nta.nic.in ಗೆ ತೆರಳಿ ಮಾರ್ಪಡಿಸಬಹುದು. ಅಂದ್ಹಾಗೆ, ಎನ್ […]
CBSE ವಿದ್ಯಾರ್ಥಿಗಳ ಗಮನಕ್ಕೆ : 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಕ್ರಮ ಕಡಿತ ಮಾಡಿಲ್ಲ : ಸ್ಪಷ್ಟನೆ ನೀಡಿದ ಮಂಡಳಿ
ನವದೆಹಲಿ : ವದಂತಿಗಳನ್ನು ತಳ್ಳಿ ಹಾಕಿರುವ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ಇ) ಮುಂಬರುವ 10ನೇ ತರಗತಿ ಯ ಬೋರ್ಡ್ ಪರೀಕ್ಷೆಗಳಿಗೆ ಸಮಾಜ ವಿಜ್ಞಾನದ ಸಿಲೆಬಸ್ ಕಡಿಮೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ. ಎರಡು ದಿನಗಳ ಹಿಂದೆ ವಿವಿಧ ವೆಬ್ ಪೋರ್ಟಲ್ ಗಳು ಸಾಮಾಜಿಕ ವಿಜ್ಞಾನ ವಿಷಯಗಳ ಥಿಯರಿಯಲಿ ಒಟ್ಟು ಐದು ಘಟಕಗಳನ್ನು ತೆಗೆದುಹಾಕಲಾಗಿದೆ ಎಂದು ವರದಿ ಮಾಡಿದ್ದವು. ಆದರೆ, ಈ ಬಗ್ಗೆ ಸದ್ಯಕ್ಕೆ ಯಾವುದೇ ಘೋಷಣೆ ಮಾಡಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ. ’10ನೇ ತರಗತಿಯ ಸಮಾಜ […]
8.51 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ: ಸುರೇಶ್ ಕುಮಾರ್
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 8.51 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ನಗರದ ಸಮಗ್ರ ಶಿಕ್ಷಣ ಕಚೇರಿಯಲ್ಲಿ 2020ರ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಯಶೋಗಾಥೆ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೋವಿಡ್-19 ನಡುವೆಯೇ ದೇಶಕ್ಕೆ ಮಾದರಿಯಾಗುವಂತೆ ಪರೀಕ್ಷೆ ನಡೆಸಿದ್ದೇವೆ. ಈ ವರ್ಷದ ಪರೀಕ್ಷೆ ಇನ್ನು ಉತ್ಕೃಷ್ಟ ರೀತಿಯಲ್ಲಿ ನಡೆಸುವ ಸವಾಲು ನಮ್ಮ ಮುಂದಿದೆ ಎಂದರು. 2021ರ ಎಸ್‌ಎಸ್‌ಎಲ್ ಸಿ […]
ಕಲ್ಯಾಣ ಕರ್ನಾಟಕಕ್ಕೆ 10 ಸಾವಿರ ಶಿಕ್ಷಕರ ನೇಮಕಕ್ಕೆ ಪ್ರಸ್ತಾಪ:ಎಸ್. ಸುರೇಶ್ ಕುಮಾರ್
ಬೆಂಗಳೂರು ಫೆ,19: ನಂಜುಂಡಪ್ಪ ವರದಿಯಂತೆ ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ವಿಶೇಷ ಶೈಕ್ಷಣಿಕ ವಲಯಗಳನ್ನು ಸ್ಥಾಪಿಸಿ ಅಭಿವೃದ್ಧಿಗೊಳಿಸಲು ಮತ್ತು ಆ ಭಾಗದ ಶಾಲೆಗಳಿಗೆ 10 ಸಾವಿರ ಶಿಕ್ಷಕರ ನೇಮಕಕ್ಕೆ 2021-22ನೇ ಸಾಲಿನ ಬಜೆಟ್‍ನಲ್ಲಿ ಅವಕಾಶ ಕಲ್ಪಿಸಬೇಕೆಂದು ಮುಖ್ಯಮಂತ್ರಿಯವರನ್ನು ಕೋರಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಸಂಬಂಧ ಅವಶ್ಯ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು. […]
ಫೆ. 22ರಿಂದ 6,7,8ನೇ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭ: ಸುರೇಶ್ ಕುಮಾರ್
ಬೆಂಗಳೂರು: ಇದೇ ತಿಂಗಳ 22ರಿಂದ ನಮ್ಮ ರಾಜ್ಯದಲ್ಲಿ 6, 7, 8 ಪೂರ್ಣ ಪ್ರಮಾಣದಲ್ಲಿ ಆರಂಭವಾಗುತ್ತೆ. ಜುಲೈ15 ರಿಂದ ಕರ್ನಾಟಕ ರಾಜ್ಯದ ಮುಂದಿನ ಶೈಕ್ಷಣಿಕ ವರ್ಷ ಆರಂಭ ಆಗಲಿದೆ. ಒಂದನೇ ತಾರೀಖಿನಿಂದ ವಿದ್ಯಾಗಮ ಮಾಡುವ ಬಗ್ಗೆ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ಶಾಲೆಗಳ ಆರಂಭದ ಕುರಿತಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಒಂದನೇ ತರಗತಿಯಿಂದ ಚಟುವಟಿಕೆ ಆರಂಭ ಮಾಡೋಕೆ ಒತ್ತಾಯ ಬರ್ತಾ ಇದೆ. 6,7,8,9ಕ್ಕೆ ವಿದ್ಯಾಗಮ ತರಗತಿ ಆರಂಭ ಮಾಡಿದ್ದೇವೆ ಎಂದು […]
ಕಳೆದ ವರ್ಷದ ಅತಿಥಿ ಉಪನ್ಯಾಸಕರ ಮುಂದುವರಿಕೆ
ಕಳೆದ ವರ್ಷದ ಅತಿಥಿ ಉಪನ್ಯಾಸಕರನ್ನು ಮುಂದುವರೆಸುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸ್ವಲ್ಪ ಮಟ್ಟಿಗೆ ಅತಿಥಿ ಉಪನ್ಯಾಸಕರಿಗೆ ಇದು ಸಮಾಧಾನಕರ ಸುದ್ಧಿಯಾಗಿದೆ. ಈ ಕುರಿತು ಫೆ 08, 2020 ರಂದು ಕಾಲೇಜು ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಖಾಯಂ ಉಪನ್ಯಾಸಕರನ್ನು ಹೊರತು ಪಡಿಸಿ 14,183 ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರವನ್ನು ವಿಭಾಗಿಸಬೇಕಾಗಿದೆ. ಆದರೆ ಆರ್ಥಿಕ ಇಲಾಖೆಯು 7091 ಅಂದರೆ 50% ಉಪನ್ಯಾಸಕರ ನೇಮಕಕ್ಕೆ ಅವಕಾಶವನ್ನು ನೀಡಿದೆ. ಆ ಕುರಿತು ಕಾಲೇಜಿನ ಪ್ರಾಂಶಿಪಾಲರಿಗೆ ಸುತ್ತೋಲೆಯನ್ನು ರವಾನಿಸಿದೆ. ಕಾಲೇಜುಗಳಲ್ಲಿ […]
ಸಹಕಾರ ಶಿಕ್ಷಣ ನಿಧಿಗೆ 4 ಲಕ್ಷ ರೂ ಚೆಕ್ ವಿತರಣೆ
ಚನ್ನಪಟ್ಟಣ ಶಿಬಿರ ಕಚೇರಿಯಲ್ಲಿ ಬಮುಲ್ ನಿರ್ದೇಶಕರಾದ ಹೆಚ್.ಸಿ. ಜಯಮುತ್ತು ರವರು ಚನ್ನಪಟ್ಟಣ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ಸಹಕಾರ ಶಿಕ್ಷಣ ನಿಧಿಗೆ 4 ಲಕ್ಷ ರೂಪಾಯಿಗಳ ಚೆಕ್ಕನ್ನು ರಾಮನಗರ ಜಿಲ್ಲಾ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಸಿಂ.ಲಿಂ. ನಾಗರಾಜು ರವರಿಗೆ ನೀಡಿದರು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಕುಕ್ಕೂರುದೊಡ್ಡಿ ಜಯರಾಮು ರವರು ಉಪ ವ್ಯವಸ್ಥಾಪಕರಾದ ಡಾ. ಕೆಂಪರಾಜು ರವರು. ಹಾಗೂ ಮುಖಂಡರು ಉಪಸ್ಥಿತರಿದ್ದರು.
ಸಂಕ್ರಾಂತಿಗೆ ನಂತರ ಪದವಿ ತರಗತಿ ಆರಂಭ
ಸಂಕ್ರಾಂತಿಹಬ್ಬದ ಬಳಿಕ ಪ್ರಥಮ ಮತ್ತು ದ್ವಿತೀಯ ಪದವಿ ವಿದ್ಯಾರ್ಥಿಗಳಿಗೆ ಆಫ್‌ಲೈನ್ ತರಗತಿಗಳು ಪ್ರಾರಂಭವಾಗಲಿವೆ. ಸರ್ಕಾರಿ ಮತ್ತು ಖಾಸಗಿ ವಲಯದ ವಿಶ್ವವಿದ್ಯಾನಿಲಯಗಳ ಕುಲಪತಿಗಳು ಹಾಗೂ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ವಿಷಯ ತಿಳಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದವರು ಆಫ್‌ಲೈನ್ ತರಗತಿಗಳನ್ನು ಆರಂಭಿಸುವಂತೆ ಸಲಹೆ ನೀಡಿದರು. ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ತರಗತಿಗಳ ಅಂತಿಮ ವರ್ಷ ಮತ್ತು ಅಂತಿಮ ಸೆಮಿಸ್ಟರ್‌ನ ಆಫ್‌ಲೈನ್ ತರಗತಿಗಳು ನಡೆಯುತ್ತಿವೆ. ದ್ವಿತೀಯ ಪಿಯು ಪರೀಕ್ಷೆಯನ್ನು […]

