ಮೇ ತಿಂಗಳಲ್ಲಿ ಪಿಯು, ಜೂನ್‌ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ
ಜೂನ್ ಮೊದಲನೇ ವಾರ ಎಸ್ಸೆಸ್ಸೆಲ್ಸಿ ಹಾಗೂ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಸಲು ತಾತ್ಕಾಲಿಕವಾಗಿ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರೀಕ್ಷೆ ದೃಷ್ಟಿಯಿಂದ ಬೋಧನೆ, ಕಲಿಕೆಗೆ ವಿಷಯಗಳನ್ನು ಶಿಕ್ಷಣ ಇಲಾಖೆ ಅಂತಿಮಗೊಳಿಸಿದೆ. ಈ ವಿವರಗಳನ್ನು ಶಾಲೆಗಳಿಗೆ ತಲುಪಿಸಲಾಗುವುದು. ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಯಾವ ಪಠ್ಯ ಅನಗತ್ಯ, ಪಿಯುಸಿಗೆ ಯಾವುದು ಅಗತ್ಯ ಎಂಬ ತೀರ್ಮಾನಿಸಲು ತಜ್ಞರು ಎರಡು ಸುತ್ತು ಹಾಗೂ ಆಯುಕ್ತರು ಮೂರು ಸುತ್ತಿನ ಸಭೆ […]
ದಾಖಲೆಗಳಿಗೆ ಡಿಜಿ ಲಾಕರ್ ರಕ್ಷಣೆ
ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಭದ್ರವಾಗಿರಿಸಲು ಡಿಜಿ ಲಾಕರ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಾಗಾರದ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಈ ಕುರಿತು ಚರ್ಚೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಎಸ್ಸೆಸ್ಸೆಲ್ಸಿ ಯಿಂದ ಉನ್ನತ ಶಿಕ್ಷಣದ ಕೊನೆಯ ಹಂತದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಸುರಕ್ಷಿತವಾಗಿ ಭದ್ರವಾಗಿರಿಸುವುದು ಯೋಜನೆ ಉದ್ದೇಶ. ಭವಿಷ್ಯದಲ್ಲಿ ಕಾಗದ ರೂಪದ ಶೈಕ್ಷಣಿಕ ದಾಖಲೆಗಳಿಗೆ ಅವಕಾಶ ಇರುವುದಿಲ್ಲ. ಡಿಜಿ ಲಾಕರ್ ವ್ಯವಸ್ಥೆ ಜಾರಿಗೆ ಉನ್ನತಾಧಿಕಾರ ಸಮಿತಿ […]
ಎಸ್ಸೆಸ್ಸೆಲ್ಸಿ-ಪಿಯು ತರಗತಿಗೆ ಶೇ.50ರಷ್ಟು ವಿದ್ಯಾರ್ಥಿಗಳು ಹಾಜರು
ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಗೆ ಶೇ. 51.95 ಹಾಗೂ ಶೇ. 55ರಷ್ಟು ವಿದ್ಯಾರ್ಥಿಗಳು ಸೋಮವಾರ ಹಾಜರಾಗಿದ್ದಾರು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿರುವ 5,492 ಪದವಿಪೂರ್ವ ಕಾಲೇಜುಗಳಲ್ಲಿ ದಾಖ ಲಾಗಿರುವ 3,62,704 ವಿದ್ಯಾರ್ಥಿಗಳ ಪೈಕಿ 1,99,553 (ಶೇ.55) ವಿದ್ಯಾರ್ಥಿಗಳು, 16,850 ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ದಾಖಲಾಗಿರುವ 9,29,130 ವಿದ್ಯಾರ್ಥಿಗಳ ಪೈಕಿ 4,81,728 (ಶೇ. 51.95) ವಿದ್ಯಾರ್ಥಿ ಗಳು ಹಾಜರಾಗಿದ್ದಾರೆ ಎಂದಿದ್ದಾರೆ. 6ರಿAದ 9ನೇ ತರಗತಿಗಳಿಗೆ ನಡೆಯುತ್ತಿರುವ ಪರಿಷ್ಕೃತ ವಿದ್ಯಾಗಮ […]
ಶಾಲೆ ಆರಂಭ
ಕಳೆದ ಮಾರ್ಚ್ನಿಂದ ಮುಚ್ಚಿದ್ದ ಶಾಲೆ-ಕಾಲೇಜುಗಳು ಜ. ೧ ರಿಂದ ಬಾಗಿಲು ತೆರೆದಿವೆ. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. Courtesyg: Google (photo)
ಸಿಇಟಿ ಕೌನ್ಸೆಲಿಂಗ್: ಜ.15ರವರೆಗೆ ವಿಸ್ತರಣೆ ಕೋರಿ ಪತ್ರ
ವೃತ್ತಿಪರ ಕೋರ್ಸ್ಗಳ ಖಾಲಿ ಉಳಿದ ಸೀಟುಗಳ ಪ್ರವೇಶಕ್ಕೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ಅಗತ್ಯವಿದ್ದು, ಜ.15ರವರೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅಧ್ಯಕ್ಷರಿಗೆ ಉನ್ನತ ಶಿಕ್ಷಣ ಇಲಾಖೆ ಪತ್ರ ಬರೆದಿದೆ. ಉಳಿದ ವೃತ್ತಿಪರ ಸೀಟ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತೊಂದು ಅವಕಾಶ ನೀಡುವಂತೆ ವಿದ್ಯಾರ್ಥಿಗಳು ಹಾಗೂ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜ.15ರವರೆಗೆ ಕಾಲಾವಕಾಶ ವಿಸ್ತರಿಸಬೇಕೆಂದು ಕರ್ನಾಟಕಅನುದಾನರಹಿತ ಖಾಸಗಿ ಶೈಕ್ಷಣಿಕಕಾಲೇಜುಗಳ ಸಂಸ್ಥೆ ಕೋರಿದೆ. ಈ ಹಿನ್ನೆಲೆಯಲ್ಲಿ ಏಐಸಿಟಿಇಗೆ ಪತ್ರ ಬರೆಯಲಾಗಿದೆಎಂದುಉನ್ನತ ಶಿಕ್ಷಣ […]
ಶಾಲೆಗಳ ಆರಂಭಕ್ಕೆ ಅಡ್ಡಿಯಿಲ್ಲ
ಹೊಸ ವೈರಸ್ ವೇಗವಾಗಿ ಹರಡಲಿದ್ದು, ಅಷ್ಟೇನೂ ಅಪಾಯಕಾರಿಯಲ್ಲ. ಆದ್ದರಿಂದ, ಶಾಲೆಗಳನ್ನು ಪ್ರಾರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಭಿಪ್ರಾಯಪಟ್ಟಿದೆ. ಡಾ.ಎಂ.ಕೆ.ಸುದರ್ಶನ್ ನೇತೃತ್ವದಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಸದಸ್ಯರು ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಿದರು. ಸಮಿತಿ ಶೀಘ್ರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಹೊಸ ಕೋವಿಡ್ ವಿದೇಶಗಳಲ್ಲಿ ವೇಗವಾಗಿ ಹರಡುತ್ತಿದೆ. ಸೋಂಕಿನ ಲಕ್ಷಣ, ಚಿಕಿತ್ಸೆಯಲ್ಲಿ ವ್ಯತ್ಯಾಸವಿಲ್ಲ. ಹರಡುವಿಕೆ ತಡೆಯಬೇಕಿದ್ದು, ಜನ ಜಾಗೃತರಾಗಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ, ಶಾಲೆಗಳನ್ನು ಪ್ರಾರಂಭಿಸಬಹುದು. ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಆಚರಣೆ […]
ವಿದ್ಯಾಗಮ ಪುನರ್ ಆರಂಭ
ವಿದ್ಯಾಗಮ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ ಪುನರ್ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಬುಡಕಟ್ಟು ಮಕ್ಕಳು ಆನ್‌ಲೈನ್ ಮೂಲಕ ಶಿಕ್ಷಣ ಪಡೆಯಲು ಅನುಕೂಲ ಆಗುವಂತೆ ಲ್ಯಾಪ್‌ಟಾಪ್, ಇಂಟರ್ ನೆಟ್ ಮತ್ತು ಮೊಬೈಲ್ ಸೇರಿ ಅಗತ್ಯ ತಾಂತ್ರಿಕ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ವಕೀಲ ಎ.ಎ. ಸಂಜೀವ್ ನರೇನ್ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಗ್ರಾಮೀಣ ಪ್ರದೇಶದಲ್ಲಿ ತಾಂತ್ರಿಕ ಸೌಲಭ್ಯ […]
ವರ್ಷಕ್ಕೆ ನಾಲ್ಕು ಬಾರಿ ಜೆಇಇ
2021ರಿಂದ ವರ್ಷದಲ್ಲಿ ನಾಲ್ಕು ಬಾರಿ ಜೆಇಇ(ಮುಖ್ಯ ಪರೀಕ್ಷೆ) ಆಯೋಜಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಅಂಕ ಗಳಿಕೆಯಲ್ಲಿ ಸುಧಾರಣೆ ಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ. ಫೆಬ್ರವರಿ, ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ. ಕನ್ನಡ, ತಮಿಳು, ತೆಲುಗು ಮತ್ತಿತರ ಪ್ರಾದೇಶಿಕ ಭಾಷೆಗಳಲ್ಲೂ ಪರೀಕ್ಷೆ ನಡೆಯುತ್ತದೆ. ೨೦೨೧ರ ಮೊದಲ ಜೆಇಇ (ಮುಖ್ಯ ಪರೀಕ್ಷೆ) ಫೆ.೨೩ರಿಂದ ೨೬ರವರೆಗೆ ನಡೆಯಲಿದೆ ಎಂದರು. Courtesyg: Google (photo)
ವಿದ್ಯಾಗಮ ಪರಿಷ್ಕರಿಸಿ ಅನುಷ್ಠಾನ
ಕೋವಿಡ್‌ನಿಂದ ಶಾಲಾರಂಭ ವಿಳಂಬವಾದ್ದರಿಂದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುರಕ್ಷತಾ ಕ್ರಮಗಳೊಂದಿಗೆ ಮರುಅನುಷ್ಠಾನಕ್ಕೆ ಸರ್ಕಾರ ನಿರ್ಧರಿಸಿದೆ. ಆ.೮ರಿಂದ ಆರಂಭಗೊಂಡ ಯೋಜನೆಯನ್ನು ಎರಡು ದಿನಗಳ ಬಳಿಕ ಸ್ಥಗಿತಗೊಳಿಸಲಾಗಿತ್ತು. ವಿದ್ಯಾಗಮದಿಂದ ಮಕ್ಕಳು ಶಾಲೆಯಿಂದ ಹೊರಗುಳಿಯುವುದು, ಹಳ್ಳಿಗಳಲ್ಲಿ ಪೋಷಕರೊಂದಿಗೆ ಕೆಲಸಗಳಿಗೆ ತೆರಳುವುದು, ಬಾಲ್ಯ ವಿವಾಹ, ಬಾಲ್ಯ ಕಾರ್ಮಿಕ ಪದ್ಧತಿಯಂಥ ಪಿಡುಗುಗಳಿಗೆ ಬಲಿಯಾಗುವುದನ್ನು ತಪ್ಪಿಸಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಲಭ್ಯ ಶಿಕ್ಷಕರು ಮತ್ತು ಕೊಠಡಿಗಳ ಸಂಖ್ಯೆಗೆ ಅನುಸಾರವಾಗಿ ೧೫-೨೦ ಮಕ್ಕಳನ್ನು ಒಂದು ತಂಡವಾಗಿ ರಚಿಸಲಾಗುವುದು. […]