Institutions of Eminence get approval to open foreign campuses
The government has issued guidelines for the so-called Institutions of Eminence to foray overseas through offshore centres and full-fledged campuses in a push to put India on the global education map. Each of these 20 higher education institutes has been allowed to open up to three offshore centres in the next five years. They will, […]
ಜೆಇಇ ಅಡ್ವಾನ್ಸ್ಡ್ ಪರೀಕ್ಷೆ: ಜುಲೈ ೩ಕ್ಕೆ
ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಪ್ರವೇಶಕ್ಕೆ ನಡೆಯುವ ಜೆಇಇ- ಅಡ್ವಾನ್ಸ್ಡ್ ಪರೀಕ್ಷೆ ಜು.3ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ. ಐಐಟಿ ಖರಗ್‌ಪುರದಲ್ಲಿ ಜು.೩ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗಲು ದ್ವಿತೀಯ ಪಿಯುನಲ್ಲಿ ಶೇ.75 ಅಂಕ ಇರಬೇಕು ಎನ್ನುವ ಶರತ್ತನ್ನು ಕೋವಿಡ್‌ನಿಂದ ಕಳೆದ ವರ್ಷ ಸಡಿಲಿಸಲಾಗಿತ್ತು. ಸಡಿಲಿಕೆ ಈ ವರ್ಷವೂ ಮುಂದುವರಿಯಲಿದೆ. ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕೆ ನಡೆಯುವ ಜೆಇಇ-ಮೇನ್ಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರು ಮಾತ್ರ ಜೆಇಇ- ಅಡ್ವಾನ್ಸ್ಡ್ ಪರೀಕ್ಷೆ ಬರೆಯಬಹುದು. Courtesyg: Google […]
ಮೇ ತಿಂಗಳಲ್ಲಿ ಪಿಯು, ಜೂನ್‌ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ
ಜೂನ್ ಮೊದಲನೇ ವಾರ ಎಸ್ಸೆಸ್ಸೆಲ್ಸಿ ಹಾಗೂ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಸಲು ತಾತ್ಕಾಲಿಕವಾಗಿ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರೀಕ್ಷೆ ದೃಷ್ಟಿಯಿಂದ ಬೋಧನೆ, ಕಲಿಕೆಗೆ ವಿಷಯಗಳನ್ನು ಶಿಕ್ಷಣ ಇಲಾಖೆ ಅಂತಿಮಗೊಳಿಸಿದೆ. ಈ ವಿವರಗಳನ್ನು ಶಾಲೆಗಳಿಗೆ ತಲುಪಿಸಲಾಗುವುದು. ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಯಾವ ಪಠ್ಯ ಅನಗತ್ಯ, ಪಿಯುಸಿಗೆ ಯಾವುದು ಅಗತ್ಯ ಎಂಬ ತೀರ್ಮಾನಿಸಲು ತಜ್ಞರು ಎರಡು ಸುತ್ತು ಹಾಗೂ ಆಯುಕ್ತರು ಮೂರು ಸುತ್ತಿನ ಸಭೆ […]
ದಾಖಲೆಗಳಿಗೆ ಡಿಜಿ ಲಾಕರ್ ರಕ್ಷಣೆ
ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಭದ್ರವಾಗಿರಿಸಲು ಡಿಜಿ ಲಾಕರ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಾಗಾರದ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಈ ಕುರಿತು ಚರ್ಚೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಎಸ್ಸೆಸ್ಸೆಲ್ಸಿ ಯಿಂದ ಉನ್ನತ ಶಿಕ್ಷಣದ ಕೊನೆಯ ಹಂತದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಸುರಕ್ಷಿತವಾಗಿ ಭದ್ರವಾಗಿರಿಸುವುದು ಯೋಜನೆ ಉದ್ದೇಶ. ಭವಿಷ್ಯದಲ್ಲಿ ಕಾಗದ ರೂಪದ ಶೈಕ್ಷಣಿಕ ದಾಖಲೆಗಳಿಗೆ ಅವಕಾಶ ಇರುವುದಿಲ್ಲ. ಡಿಜಿ ಲಾಕರ್ ವ್ಯವಸ್ಥೆ ಜಾರಿಗೆ ಉನ್ನತಾಧಿಕಾರ ಸಮಿತಿ […]
ಎಸ್ಸೆಸ್ಸೆಲ್ಸಿ-ಪಿಯು ತರಗತಿಗೆ ಶೇ.50ರಷ್ಟು ವಿದ್ಯಾರ್ಥಿಗಳು ಹಾಜರು
ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಗೆ ಶೇ. 51.95 ಹಾಗೂ ಶೇ. 55ರಷ್ಟು ವಿದ್ಯಾರ್ಥಿಗಳು ಸೋಮವಾರ ಹಾಜರಾಗಿದ್ದಾರು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿರುವ 5,492 ಪದವಿಪೂರ್ವ ಕಾಲೇಜುಗಳಲ್ಲಿ ದಾಖ ಲಾಗಿರುವ 3,62,704 ವಿದ್ಯಾರ್ಥಿಗಳ ಪೈಕಿ 1,99,553 (ಶೇ.55) ವಿದ್ಯಾರ್ಥಿಗಳು, 16,850 ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ದಾಖಲಾಗಿರುವ 9,29,130 ವಿದ್ಯಾರ್ಥಿಗಳ ಪೈಕಿ 4,81,728 (ಶೇ. 51.95) ವಿದ್ಯಾರ್ಥಿ ಗಳು ಹಾಜರಾಗಿದ್ದಾರೆ ಎಂದಿದ್ದಾರೆ. 6ರಿAದ 9ನೇ ತರಗತಿಗಳಿಗೆ ನಡೆಯುತ್ತಿರುವ ಪರಿಷ್ಕೃತ ವಿದ್ಯಾಗಮ […]
ಶಾಲೆ ಆರಂಭ
ಕಳೆದ ಮಾರ್ಚ್ನಿಂದ ಮುಚ್ಚಿದ್ದ ಶಾಲೆ-ಕಾಲೇಜುಗಳು ಜ. ೧ ರಿಂದ ಬಾಗಿಲು ತೆರೆದಿವೆ. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. Courtesyg: Google (photo)
ಸಿಇಟಿ ಕೌನ್ಸೆಲಿಂಗ್: ಜ.15ರವರೆಗೆ ವಿಸ್ತರಣೆ ಕೋರಿ ಪತ್ರ
ವೃತ್ತಿಪರ ಕೋರ್ಸ್ಗಳ ಖಾಲಿ ಉಳಿದ ಸೀಟುಗಳ ಪ್ರವೇಶಕ್ಕೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ಅಗತ್ಯವಿದ್ದು, ಜ.15ರವರೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅಧ್ಯಕ್ಷರಿಗೆ ಉನ್ನತ ಶಿಕ್ಷಣ ಇಲಾಖೆ ಪತ್ರ ಬರೆದಿದೆ. ಉಳಿದ ವೃತ್ತಿಪರ ಸೀಟ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತೊಂದು ಅವಕಾಶ ನೀಡುವಂತೆ ವಿದ್ಯಾರ್ಥಿಗಳು ಹಾಗೂ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜ.15ರವರೆಗೆ ಕಾಲಾವಕಾಶ ವಿಸ್ತರಿಸಬೇಕೆಂದು ಕರ್ನಾಟಕಅನುದಾನರಹಿತ ಖಾಸಗಿ ಶೈಕ್ಷಣಿಕಕಾಲೇಜುಗಳ ಸಂಸ್ಥೆ ಕೋರಿದೆ. ಈ ಹಿನ್ನೆಲೆಯಲ್ಲಿ ಏಐಸಿಟಿಇಗೆ ಪತ್ರ ಬರೆಯಲಾಗಿದೆಎಂದುಉನ್ನತ ಶಿಕ್ಷಣ […]
ಶಾಲೆಗಳ ಆರಂಭಕ್ಕೆ ಅಡ್ಡಿಯಿಲ್ಲ
ಹೊಸ ವೈರಸ್ ವೇಗವಾಗಿ ಹರಡಲಿದ್ದು, ಅಷ್ಟೇನೂ ಅಪಾಯಕಾರಿಯಲ್ಲ. ಆದ್ದರಿಂದ, ಶಾಲೆಗಳನ್ನು ಪ್ರಾರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಭಿಪ್ರಾಯಪಟ್ಟಿದೆ. ಡಾ.ಎಂ.ಕೆ.ಸುದರ್ಶನ್ ನೇತೃತ್ವದಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಸದಸ್ಯರು ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಿದರು. ಸಮಿತಿ ಶೀಘ್ರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಹೊಸ ಕೋವಿಡ್ ವಿದೇಶಗಳಲ್ಲಿ ವೇಗವಾಗಿ ಹರಡುತ್ತಿದೆ. ಸೋಂಕಿನ ಲಕ್ಷಣ, ಚಿಕಿತ್ಸೆಯಲ್ಲಿ ವ್ಯತ್ಯಾಸವಿಲ್ಲ. ಹರಡುವಿಕೆ ತಡೆಯಬೇಕಿದ್ದು, ಜನ ಜಾಗೃತರಾಗಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ, ಶಾಲೆಗಳನ್ನು ಪ್ರಾರಂಭಿಸಬಹುದು. ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಆಚರಣೆ […]
ವಿದ್ಯಾಗಮ ಪುನರ್ ಆರಂಭ
ವಿದ್ಯಾಗಮ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ ಪುನರ್ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಬುಡಕಟ್ಟು ಮಕ್ಕಳು ಆನ್‌ಲೈನ್ ಮೂಲಕ ಶಿಕ್ಷಣ ಪಡೆಯಲು ಅನುಕೂಲ ಆಗುವಂತೆ ಲ್ಯಾಪ್‌ಟಾಪ್, ಇಂಟರ್ ನೆಟ್ ಮತ್ತು ಮೊಬೈಲ್ ಸೇರಿ ಅಗತ್ಯ ತಾಂತ್ರಿಕ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ವಕೀಲ ಎ.ಎ. ಸಂಜೀವ್ ನರೇನ್ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಗ್ರಾಮೀಣ ಪ್ರದೇಶದಲ್ಲಿ ತಾಂತ್ರಿಕ ಸೌಲಭ್ಯ […]

