Category: ಋತ ಮೀಡಿಯಾ

ಋತ ಮೀಡಿಯಾ, ಕೃಷಿ-ಗ್ರಾಮೀಣಾಭಿವೃದ್ಧಿ, ಪರಿಸರಜೀವಿಶಾಸ್ತ್ರ, ವಿಜ್ಞಾನ-ತಂತ್ರಜ್ಞಾನ, ಹಸಿರು ಉದ್ಯಮ, ಬ್ಯಾಂಕಿಂಗ್-ವಿಮೆ-ಹಣಕಾಸು ಮಾರುಕಟ್ಟೆ ಇತ್ಯಾದಿ ಕ್ಷೇತ್ರಗಳನ್ನು ಆದ್ಯತೆಯಾಗುಳ್ಳ ಸುದ್ದಿ ಮಾಧ್ಯಮ. ಈ ಸಂಬಂಧಿತ ಸುದ್ದಿ, ಪಾಡ್, ವಿಡಿಯೋ, ಡಾಕ್ಯುಮೆಂಟರಿ ಇತ್ಯಾದಿ ಪ್ರಕಟಣೆ ನಮ್ಮ ಉದ್ದೇಶ.

ಆರೋಗ್ಯ: ವಿಷನ್ ಗ್ರೂಪ್ ರಚನೆ

ಆರೋಗ್ಯ ಮತ್ತು ವೈದ್ಯ ಶಿಕ್ಷಣ ಕ್ಷೇತ್ರದ ಸುಧಾರಣೆ ಕುರಿತು ಸಲಹೆ ಹಾಗೂ ಶಿಫಾರಸುಗಳನ್ನು ಪಡೆಯಲು ಸರ್ಕಾರ ನಿಮ್ಹಾನ್ಸ್ ನಿರ್ದೇಶಕ ಡಾ.ಜಿ. ಗುರುರಾಜ್ ಅಧ್ಯಕ್ಷತೆಯಲ್ಲಿ ವಿಷನ್ ಗ್ರೂಪ್ ರಚಿಸಿದೆ. ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳು, ಆವಿಷ್ಕಾರಗಳನ್ನು ವಿಷನ್ ಗ್ರೂಪ್ ಸರ್ಕಾರದ ಗಮನಕ್ಕೆ ತರಲಿದೆ. ನಾನಾ ಆರೋಗ್ಯ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅಧ್ಯಯನ ನಡೆಸಿ, ಗುಣಾತ್ಮಕ ಬದಲಾವಣೆಗೆ ಸಲಹೆ ನೀಡಲಿದೆ. ಆರೋಗ್ಯ ಮತ್ತು ವೈದ್ಯ ಶಿಕ್ಷಣ ಇಲಾಖೆ ನಡುವೆ  ಸಂಯೋಜನೆಯಲ್ಲದೆ, ಗುಣಮಟ್ಟದ ಆರೋಗ್ಯ ಸೇವೆಗೆ ಸಂಬAಧಿಸಿದAತೆ ಶಿಫಾರಸು ಮಾಡಲಿದೆ. ಸಮಿತಿಯಲ್ಲಿ […]

ರೂಪಾಂತರ ಕೊರೊನಾ: ಸೋಂಕಿತರ ಸಂಖ್ಯೆ ೩೩

ಬ್ರಿಟನ್‌ನಿಂದ ರಾಜ್ಯಕ್ಕೆ ಬಂದವರ ಪೈಕಿ ಇನ್ನಿಬ್ಬರು ಕೋವಿಡ್ ಪೀಡಿತರಾಗಿದ್ದು, ಸೋಂಕಿತÀರ ಸಂಖ್ಯೆ ೩೩ ಕ್ಕೆ ಏರಿಕೆಯಾಗಿದೆ. ನೂರಕ್ಕೂ ಅಧಿಕ ಮಂದಿ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಬ್ರಿಟನ್‌ನಿಂದ ವಾಪಸಾದವರಲ್ಲಿ ೬೩ ಮಂದಿಗೆ ಆರ್‌ಟಿ–ಪಿಸಿಆರ್ ಪರೀಕ್ಷೆ ನಡೆಸಿದ್ದು, ಅದರಲ್ಲಿ ಇಬ್ಬರ ವರದಿ ಮಾತ್ರ ಬಂದಿದೆ. ವಾಪಸಾದವರಲ್ಲಿ ೨,೦೨೮ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಅವರಲ್ಲಿ ೧,೮೮೭ ಮಂದಿಗೆ ಸೋಂಕು ತಗುಲಿಲ್ಲ. ಇನ್ನೂ ೧೦೮ ಮಂದಿಯ ವರದಿ ಬರಬೇಕಿದೆ. ನಾನಾ  ದೇಶಗಳಿಂದ ಆಗಮಿಸಿದ ೭೯೭ ಮಂದಿಯನ್ನು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. […]

ಶಾಲೆ ಆರಂಭ

ಕಳೆದ ಮಾರ್ಚ್ನಿಂದ ಮುಚ್ಚಿದ್ದ ಶಾಲೆ-ಕಾಲೇಜುಗಳು ಜ. ೧ ರಿಂದ ಬಾಗಿಲು ತೆರೆದಿವೆ. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. Courtesyg: Google (photo)

ಹೊಸ ವರ್ಷಕ್ಕೆ ಲಸಿಕೆ ಸಾಧ್ಯತೆ

ಹೊಸ ವರ್ಷದಲ್ಲಿ ಕೋವಿಡ್ ಲಸಿಕೆ ಸಿಗುವ ಸಾಧ್ಯತೆ ಇದೆ ಎಂದು ಭಾರತೀಯ ಔಷಧ ಮಹಾ ನಿಯಂತ್ರಕ ವಿ.ಜಿ. ಸೊಮಾನಿ ಸುಳಿವು ನೀಡಿದ್ದಾರೆ. ತಮ್ಮ ಲಸಿಕೆಗಳ ತುರ್ತು ಬಳಕೆಗೆ ಅನುಮತಿ ನೀಡಬೇಕೆಂದು ಸೀರಂ ಇನ್ಸ್ಟಿಟ್ಯೂಟ್, ಭಾರತ್ ಬಯೋಟೆಕ್ ಹಾಗೂ ಫೀಜರ್ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಈ ಬಗ್ಗೆ ಪ್ರಾಯಶಃ ಇಂದು(ಶುಕ್ರವಾರ) ಅಂತಿಮ ತೀರ್ಮಾನ ಬರಲಿದೆ. ಜ.೨ರಂದು ಕೋವಿಡ್ ಲಸಿಕೆ ಅಣಕು ಕಾರ್ಯಾಚರಣೆ ನಡೆಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಮುಂದಿನ ತಿಂಗಳುಗಳಲ್ಲಿ […]

ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿದ ಚೀನಾದ ಜಾಂಗ್ ಶನ್ಶನ್

ಚೀನಾದ ಬಿಲಿಯನೇರ್ ಉದ್ಯಮಿ ಜಾಂಗ್ ಶನ್ಶನ್ ಏಷ್ಯಾದ ಅತ್ಯಂತ ಶ್ರೀಮಂತನ ಪಟ್ಟಕ್ಕೇರಿದ್ದಾರೆ. ಭಾರತದ ಮುಖೇಶ್ ಅಂಬಾನಿ, ತಮ್ಮದೇ ದೇಶದ ಜಾಕ್ ಮಾ ಅವರನ್ನೂ ಹಿಂದಿಕ್ಕಿ ಈ ಸ್ಥಾನ ಅಲಂಕರಿಸಿದ್ದಾರೆ. 66 ವರ್ಷದ ಜಾಂಗ್ ಅವರ ನಿವ್ವಳ ಆಸ್ತಿ ಮೌಲ್ಯವು 2020 ರಲ್ಲಿ 70.9 ಬಿಲಿಯನ್ ಡಾಲರ್ಗಳಷ್ಟು ಏರಿಕೆಯಾಗಿ 77.8 ಬಿಲಿಯನ್ ಡಾಲರ್ಗೆ ತಲುಪಿದೆ ಎಂದು ಬ್ಲೂಮ್ಬರ್ಗ್ ಬಿಲಿಯನೇರ್ಸ್ ಸೂಚ್ಯಂಕ ಹೇಳಿದೆ. ಈ ಪ್ರಕಾರ ಜಾಂಗ್ ಇದೀಗ ವಿಶ್ವದ 11 ನೇ ಶ್ರೀಮಂತ ವ್ಯಕ್ತಿ. ಜಾಂಗ್ ಚೀನಾದ ಅತಿದೊಡ್ಡ […]

ಜಿಯೊದಿಂದ ಜನವರಿಗೆ ಬಂಪರ್ ಕೊಡುಗೆ

ರಿಲಯನ್ಸ್ ಜಿಯೊ ನೆಟ್‌ವರ್ಕ್‌ನಿಂದ ದೇಶದಲ್ಲಿ ಯಾವುದೇ ನೆಟ್‌ವರ್ಕ್‌ಗಳಿಗೆ ಹೊಸ ವರ್ಷದಿಂದ ಎಲ್ಲ ಕರೆಗಳು ಉಚಿತವಾಗಿ ಲಭ್ಯವಾಗಲಿದೆ ಎಂದು ಜಿಯೊ ಗುರುವಾರ ಪ್ರಕಟಿಸಿದೆ. ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ ನಿರ್ದೇಶನಗಳ ಪ್ರಕಾರದಂತೆ 2021ರ ಜನವರಿ ೧ರಿಂದ ಹೊಸ ಕ್ರಮಗಳನ್ನು ಜಿಯೊ ಅನುಷ್ಠಾನಗೊಳಿಸುತ್ತಿದ್ದು, ಎಲ್ಲ ದೇಶೀಯ ಧ್ವನಿ ಕರೆಗಳ ಮೇಲಿನ ಮೊಬೈಲ್ ನೆಟ್‌ವರ್ಕ್ ಅಂತರ್ ಸಂಪರ್ಕ ಬಳಕೆ ಶುಲ್ಕವನ್ನು ಕೊನೆಗೊಳಿಸಲಾಗುತ್ತಿದೆ. ಐಯುಸಿ ಕ್ರಮಗಳ ಅನುಸಾರ ಜನವರಿ 1ರಿಂದ ಜಿಯೊ ನೆಟ್‌ವರ್ಕ್‌ನಿಂದ ದೇಶದಲ್ಲಿ ಯಾವುದೇ ನೆಟ್‌ವರ್ಕ್ ಮಾಡುವ ವಾಯ್ಸ್ ಕಾಲ್‌ಗಳಿಗೆ ಶುಲ್ಕ ಇರುವುದಿಲ್ಲ. […]

ರೈತ ಹೋರಾಟ: ಸಿಗದ ಪರಿಹಾರ

ರೈತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಕೇಂದ್ರ ಸರ್ಕಾರದ ನಡುವೆ ನಡೆದ ಆರನೇ ಸುತ್ತಿನ ಮಾತುಕತೆ ವಿಫಲವಾಗಿದ್ದು, ಜನವರಿ ೪ರಂದು ಚರ್ಚೆ ಮುಂದುವರಿಯಲಿದೆ. ವಿದ್ಯುತ್ ದರ ಹೆಚ್ಚಳ ಹಾಗೂ ಕೃಷಿ ತ್ಯಾಜ್ಯ ದಹಿಸುವ ರೈತರಿಗೆ ದಂಡ ವಿಷಯದಲ್ಲಿ ಸಹಮತ ಏರ್ಪಟ್ಟಿದೆ. ಆದರೆ, ಕೃಷಿ ಮಾರುಕಟ್ಟೆ ಕಾಯ್ದೆಗಳ ರದ್ದು ಹಾಗೂ ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ನೀಡಬೇಕೆಂಬ ರೈತರ ಪ್ರಮುಖ ಬೇಡಿಕೆಗಳಿಗೆ ಪರಿಹಾರ ಸಿಕ್ಕಿಲ್ಲ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಸಚಿವರಾದ ಪೀಯೂಷ್ ಗೋಯಲ್ ಮತ್ತು ಸೋಮಪ್ರಕಾಶ್ […]

ಜೈವಿಕ ತಾಣವಾಗಿ ರೋರಿಚ್‌ಎಸ್ಟೇಟ್: ಶಿಫಾರಸು

ಕನಕಪುರ ರಸ್ತೆಯಲ್ಲಿರುವ ದೇವಿಕಾರಾಣಿ-ರೋರಿಚ್‌ಎಸ್ಟೇಟ್‌ನ್ನು ಪಾರಂಪರಿಕ ಜೈವಿಕ ತಾಣವೆಂದು ಘೋಷಿಸಬೇಕು ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ಶಿಫಾರಸು ಮಾಡಿದೆ. ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ, ತಜ್ಞರು ಹಾಗೂ ಅರಣ್ಯಾಧಿಕಾರಿಗಳನ್ನು ಒಳಗೊಂಡ ತಂಡ ಡಿ.24 ರಂದು ಎಸ್ಟೇಟ್‌ಗೆ ಭೇಟಿ ನೀಡಿ, ಪರಿಸರ, ಜೀವವೈವಿಧ್ಯ ಕುರಿತು ಸಮೀಕ್ಷೆ ನಡೆಸಿ, ಸಿದ್ಧಪಡಿಸಿದ ವರದಿಯನ್ನು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರಿಗೆ ಸಲ್ಲಿಸಲಾಗಿದೆÀ. ದೇವಿಕಾರಾಣಿ-ರೋರಿಚ್ ಎಸ್ಟೇಟ್ ರಾಜಧಾನಿಯ ಅದ್ಭುತ ಜೈವಿಕ ಭಂಡಾರವಾಗಿದ್ದು, 2002ರ ಜೀವವೈವಿಧ್ಯ ಕಾಯ್ದೆ ಅಡಿಯಲ್ಲಿ ಪಾರಂಪರಿಕ ತಾಣ ಎಂದು […]

ಜಾಯಿಕಾಯಿ, ಜಾಪತ್ರೆ ಬೆಲೆ ಹೆಚ್ಚಳ

ಸಾಂಬಾರ ಪದಾರ್ಥಗಳಾದ ಜಾಯಿಕಾಯಿ ಹಾಗೂ ಜಾಯಿಪತ್ರೆ ಬೆಲೆ ಹೆಚ್ಚಳಗೊಂಡಿದೆ. ಕೆಜಿಗೆ 200-220 ರೂ. ಆಸುಪಾಸಿನಲ್ಲಿರುತ್ತಿದ್ದ ಕೋಶಸಹಿತ ಜಾಯಿಕಾಯಿ ಬೆಲೆ, 300ರೂ. ಆಗಿದೆ. ಕೇರಳದಲ್ಲಿ ಕೋಶರಹಿತ ಜಾಯಿಕಾಯಿ ದರ 600 ರೂ.ಮುಟ್ಟಿದೆ. ಜಾಯಿಪತ್ರೆ ಬೆಲೆ ಕೆ.ಜಿ.ಗೆ 700-1,250 ರೂ.ನಿಂದ 1,800-2,000 ರೂ. ಹೆಚ್ಚಳಗೊಂಡಿದೆ. ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕಿನ ಕೆಲ ಭಾಗ ಹಾಗೂ ಶಿರಸಿ, ಸಾಗರ ತಾಲೂಕಿನ ಹಲವೆಡೆ ಅಡಕೆ ತೋಟದಲ್ಲಿ ಉಪ ಬೆಳೆಯಾಗಿ ಬೆಳೆಯುವ ಜಾಯಿಕಾಯಿಗೆ ಬೇಡಿಕೆ ಹೆಚ್ಚಿದೆ.   Courtesyg: Google (photo)

Back To Top