Category: ಋತ ಮೀಡಿಯಾ

ಋತ ಮೀಡಿಯಾ, ಕೃಷಿ-ಗ್ರಾಮೀಣಾಭಿವೃದ್ಧಿ, ಪರಿಸರಜೀವಿಶಾಸ್ತ್ರ, ವಿಜ್ಞಾನ-ತಂತ್ರಜ್ಞಾನ, ಹಸಿರು ಉದ್ಯಮ, ಬ್ಯಾಂಕಿಂಗ್-ವಿಮೆ-ಹಣಕಾಸು ಮಾರುಕಟ್ಟೆ ಇತ್ಯಾದಿ ಕ್ಷೇತ್ರಗಳನ್ನು ಆದ್ಯತೆಯಾಗುಳ್ಳ ಸುದ್ದಿ ಮಾಧ್ಯಮ. ಈ ಸಂಬಂಧಿತ ಸುದ್ದಿ, ಪಾಡ್, ವಿಡಿಯೋ, ಡಾಕ್ಯುಮೆಂಟರಿ ಇತ್ಯಾದಿ ಪ್ರಕಟಣೆ ನಮ್ಮ ಉದ್ದೇಶ.

ಪಿಯುಸಿಗೆ ಆನ್‍ಲೈನ್ ಪರೀಕ್ಷೆ

2ನೇ ಪಿಯುಸಿ ಪರೀಕ್ಷೆಯನ್ನು ಆನ್‍ಲೈನ್‍ನಲ್ಲಿ ನಡೆಸಲು ಸಾಧ್ಯವಿದೆಯೇ ಎಂದು ಪಿಯು ಇಲಾಖೆ ಪರಿಶೀಲಿಸುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ತರಗತಿಯಲ್ಲಿ ಪರೀಕ್ಷೆ ನಡೆಸುವ ಸಾಧ್ಯತೆ ಕ್ಷೀಣವಾಗಿದೆ. ಹೀಗಾಗಿ, ಪ್ರಮುಖ ವಿಷಯಗಳಲ್ಲಿ 90 ನಿಮಿಷಗಳ ಪರೀಕ್ಷೆ ನಡೆಸಬಹುದು ಹಾಗೂ ಬಹು ಆಯ್ಕೆ ಪ್ರಶ್ನೆಗಳನ್ನು ಮಾತ್ರ ಕೇಳಬೇಕು ಎನ್ನುವ ಸಲಹೆಗಳು ಇಲಾಖೆಗೆ ಬಂದಿವೆ. ಆದರೆ, ಆನ್‍ಲೈನ್ ಪರೀಕ್ಷೆ ನಡೆಸಲು ಅಂತರ್ಜಾಲ ಸಂಪರ್ಕ, ವಿದ್ಯುತ್ ಸಂಪರ್ಕ, ಮಾತ್ರವಲ್ಲದೆ ಮೂಲಭೂತ ವ್ಯವಸ್ಥೆಯ ಕೊರತೆ ಇದೆ. ಇದನ್ನು ನಿವಾರಿಸಲು ಎಂಜಿನಿಯರಿಂಗ್ ಕಾಲೇಜುಗಳನ್ನು ಬಳಸಿಕೊಳ್ಳಬಹುದೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಆನ್‍ಲೈನ್ […]

ಮೇಕೆದಾಟು ಜಂಟಿ ಸಮಿತಿ: ರಾಜ್ಯ ಆಕ್ಷೇಪ

ಮೇಕೆದಾಟುವಿನಲ್ಲಿ ಅಕ್ರಮ ನಿರ್ಮಾಣ ನಡೆದಿದೆಯೇ ಎಂಬುದನ್ನು ಪರಿಶೀಲಿಸಲು ಜಂಟಿ ಸಮಿತಿ ರಚನೆಯನ್ನು ಪ್ರಶ್ನಿಸುವುದಾಗಿ ರಾಜ್ಯ ಹೇಳಿದೆ. ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ದಕ್ಷಿಣ ವಲಯದ ಪೀಠ ಸೂಮೋಟೋ ಪ್ರಕರಣ ದಾಖಲಿಸಿಕೊಂಡು, ಯೋಜನಾ ಸ್ಥಳದಲ್ಲಿ ಪರಿಸರ ಪರಿಣಾಮ ಲೆಕ್ಕಾಚಾರವನ್ನು ಉಲ್ಲಂಘಿಸಿ ಏನಾದರೂ ಕಾಮಗಾರಿ ನಡೆದಿದೆಯೇ ಎನ್ನುವುದನ್ನು ಪರಿಶೀಲಿಸಲು ಜಂಟಿ ಸಮಿತಿಯನ್ನು ರಚಿಸಿತ್ತು. ಈ ಆದೇಶವನ್ನು ಹಿಂಪಡೆಯಬೇಕೆಂದು ಅರ್ಜಿ ಸಲ್ಲಿಸುವುದಾಗಿ ಸಂಪುಟ ಸಭೆ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಜಂಟಿ ಸಮಿತಿಯು ಜುಲೈ 5ರಂದು ವರದಿ ನೀಡಬೇಕೆಂದು ಎನ್‍ಜಿಟಿ […]

ಕೋವಿಡ್ ಲಸಿಕೆ ಕೊರತೆಗೆ ರಾಜ್ಯಗಳು ಹೊಣೆ: ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರದ ಕೋವಿಡ್ ಸಲಹೆಗಾರ ವಿ.ಕೆ.ಪಾಲ್, ಲಸಿಕೆ ಕೊರತೆಗೆ ರಾಜ್ಯ ಸರ್ಕಾರಗಳೇ ಹೊಣೆ ಎನ್ನುವ ಮೂಲಕ ಕೈ ತೊಳೆದುಕೊಂಡಿದ್ದಾರೆ. ರಾಜ್ಯ ಹಾಗೂ ದೇಶದೆಲ್ಲೆಡೆ ಲಸಿಕೆ ಕೊರತೆ ತೀವ್ರವಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಪೂರೈಕೆ ಕೊರತೆ ಇದ್ದು, ಖಾಸಗಿ ಆಸ್ಪತ್ರೆಗಳು ಡೋಸ್ ಒಂದಕ್ಕೆ 800 ರಿಂದ 1400 ರೂ.ವರೆಗೆ ತೆಗೆದುಕೊಳ್ಳುತ್ತಿವೆ. ಜತೆಗೆ, ಸೇವಾ ಶುಲ್ಕವನ್ನು 100 ರೂ.ನಿಂದ 300 ರೂ.ಗೆ ಹೆಚ್ಚಿಸಿಕೊಂಡಿವೆ. ರಾಜ್ಯ ಸರ್ಕಾರಗಳು ನೇರವಾಗಿ ಅಂತಾರಾಷ್ಟ್ರೀಯ ಟೆಂಡರ್ ಕರೆದು, ಲಸಿಕೆ ಪಡೆದುಕೊಳ್ಳಲು ಲಸಿಕೆಗೆ ಸಂಬಂಧಿಸಿದಂತೆ ಸುಪ್ರೀಂ/ಹೈ ಕೋರ್ಟ್ ಸರ್ಕಾರಗಳಿಗೆ […]

ಮೇಕೆದಾಟು: ಎನ್‍ಜಿಟಿಯಿಂದ ಜಂಟಿ ಸಮಿತಿ

ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ದಕ್ಷಿಣ ಪೀಠ ಮೇಕೆದಾಟು ಪ್ರದೇಶದಲ್ಲಿ ಅಕ್ರಮ ನಿರ್ಮಾಣ ಕಾರ್ಯಗಳು ನಡೆಯುತ್ತಿವೆಯೇ ಎನ್ನುವುದನ್ನು ಪರಿಶೀಲಿಸಲು ಜಂಟಿ ಸಮಿತಿಯನ್ನು ರಚಿಸಿದೆ. ಜುಲೈ 5ರೊಳಗೆ ವರದಿ ಸಲ್ಲಿಸಬೇಕೆಂದು ನಿರ್ದೇಶಿಸಿದೆ. ಈ ಕುರಿತು ಮಾಧ್ಯಮದಲ್ಲಿ ವರದಿಯೊಂದು ಪ್ರಕಟವಾಗಿತ್ತು. ಸೋಮೋಟೋ ಪ್ರಕರಣ ದಾಖಲಿಸಿಕೊಂಡಿರುವ ಎನ್‍ಜಿಟಿ, ಪರಿಸರ ಪರಿಣಾಮ ಲೆಕ್ಕಾಚಾರ ನಡೆಸದೆ ಹಾಗೂ ಅಗತ್ಯವಿರುವ ಅನುಮತಿಗಳನ್ನು ಪಡೆಯದೆ, ನಿರ್ಮಾಣ ಕಾರ್ಯಕ್ಕೆ ಮುಂದಾಗುವುದು ಅಕ್ರಮವಾಗಲಿದೆ ಎಂದಿದೆ. ಕರ್ನಾಟಕ ಸರ್ಕಾರ ಕಾವೇರಿ ನದಿಗೆ ಅಡ್ಡವಾಗಿ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದೆ. ****

ಐಟಿ ಕಾಯಿದೆ: ಹೈಕೋರ್ಟ್ ಕದ ತಟ್ಟಿದ ವಾಟ್ಸ್ ಆಪ್

ನಿಗೂಢಲಿಪಿ(ಎನ್‍ಕ್ರಿಪ್ಷನ್)ಯನ್ನು ಬಹಿರಂಗಗೊಳಿಸುವುದು ನಾಗರಿಕರ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದಿರುವ ವಾಟ್ಸ್ ಆಪ್, ನೂತನ ಐಟಿ ಕಾಯಿದೆಯನ್ನು ಪ್ರಶ್ನಿಸಿ ದಿಲ್ಲಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಯಾವ ಮೂಲಭೂತ ಹಕ್ಕು ಕೂಡ ನಿರಂಕುಶವಲ್ಲ ಎಂದು ಹೇಳಿದೆ. ಹೊಸ ಐಟಿ ಕಾಯಿದೆಯಿಂದ ನಾಗರಿಕರ ಖಾಸಗಿತನದ ಹಕ್ಕು ಹಾಗೂ ವಾಕ್-ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲಿದೆ. ಕೆ.ಎಸ್.ಪುಟ್ಟಸ್ವಾಮಿ ವಿರುದ್ಧ ಭಾರತ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ಖಾಸಗಿತನದ ಹಕ್ಕು ಮೂಲಭೂತ ಹಕ್ಕು ಎಂದಿದೆ. ಮಧ್ಯಸ್ಥ ಕಂಪನಿಗಳು ಮಾಹಿತಿಯನ್ನು ಸೃಷ್ಟಿಸಿದವರ ಗುರುತನ್ನು ನೀಡುವುದು […]

ಯಸ್‍ನಿಂದ ಅಪಾರ ಹಾನಿ

ಪಶ್ಚಿಮ ಬಂಗಾಳ ಹಾಗೂ ಒಡಿಷಾಕ್ಕೆ ಅಪ್ಪಳಿಸಿರುವ ಯಸ್, ಅಪಾರ ಪ್ರಾಣ ಹಾಗೂ ಆಸ್ತಿ ಹಾನಿಗೆ ಕಾರಣವಾಗಿದೆ. ಒಡಿಷಾದಲ್ಲಿ ನಾಲ್ಕು ಹಾಗೂ ಪಶ್ಚಿಮ ಬಂಗಾಳದಲ್ಲಿ ಒಬ್ಬರು ಪ್ರಾಣ ತೆತ್ತಿದ್ದಾರೆ. ಪೂರ್ವ ಕರಾವಳಿಯ ಪಶ್ಚಿಮ ಬಂಗಾಳ ಹಾಗೂ ಒಡಿಷಾದ ಗಡಿ ಪ್ರದೇಶದಲ್ಲಿ ಅಪಾರ ಹಾನಿಗೆ ಕಾರಣವಾಗಿದೆ. ಒಡಿಷಾದ ಬಾಲಸೋರ್ ಹಾಗೂ ಭದ್ರಕ್ ಜಿಲ್ಲೆಗಳ 128 ಗ್ರಾಮಗಳಿಗೆ ಸಮುದ್ರದ ನೀರು ನುಗ್ಗಿದೆ. ಪಶ್ಚಿಮ ಬಂಗಾಳದಲ್ಲಿ 15 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಒಡಿಷಾದಲ್ಲಿ 6.5 ಲಕ್ಷ […]

ಬಂಗಾಳಕೊಲ್ಲಿ ಮಾಮೂಲಿಗಿಂತ ಹೆಚ್ಚು ಬಿಸಿ

ಯಾಸ್ ಇಂದು ಅಪ್ಪಳಿಸಲಿದ್ದು, ಇನರ ಸ್ಥಳಾಂತರಕ್ಕೆ ಸರ್ಕಾರಗಳು ಪರದಾಡುತ್ತಿವೆ. ಈ ಚಂಡಮಾರುತದ ಮೂಲವಾದ ಬಂಗಾಳ ಕೊಲ್ಲಿ ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷ, ಹೆಚ್ಚು ಬಿಸಿಯಾಗಿತ್ತು ಎಂದು ವಿಜ್ಞಾನಿಗಳು ಹೇಳಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಬಂಗಾಳ ಕೊಲ್ಲಿಯಲ್ಲಿ ಉಷ್ಣತೆ 2 ಡಿಗ್ರಿ ಸೆಂಟಿಗ್ರೇಡ್ ಅಧಿಕವಿದೆ ಎಮದು ಪುಣೆಯ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟ್ರಾಪಿಕಲ್ ಮೆಟ್ರಾಲಜಿಯ ವಿಜ್ಞಾನಿಗಳು ಹೇಳಿದ್ದಾರೆ. ಸಾಧಾರಣವಾಗಿ ಬಂಗಾಳ ಕೊಲ್ಲಿಯ ಚಂಡಮಾರುತಗಳು ಅತ್ಯಂತ ತೀವ್ರವಾಗಿರಲಿದ್ದು, ಕಳೆದ ಮಾರ್ಚ್‍ನಲ್ಲಿ ಪಶ್ಚಿಮ ಬಂಗಾಳದಲ್ಲಿ ಭಾರಿ ಜನ-ಆಸ್ತಿ ನಾಶಕ್ಕೆ ಅಂಫನ್ […]

ಇಂಧನ ಬೆಲೆ 13ನೇ ಬಾರಿ ಹೆಚ್ಚಳ

ಪ್ರಸ್ತುತ ಮಾಸದಲ್ಲಿ ಇಂಧನ ಬೆಲೆ 13ನೇ ಬಾರಿ ಹೆಚ್ಚಳಗೊಂಡಿದ್ದು, ಪೆಟ್ರೋಲ್ ಬೆಲೆ ಲೀಟರ್‍ಗೆ 100 ರೂ. ಆಗಲು ಹೆಚ್ಚು ಕಾಲ ಬೇಕಿಲ್ಲ. ಮೇ 26ರ ಬುಧವಾರ ಪೆಟ್ರೋಲ್ ಬೆಲೆ 23 ಪೈಸೆ ಹಾಗೂ ಡೀಸೆಲ್ ಬೆಲೆ 25 ಪೈಸೆ ಹೆಚ್ಚಳಗೊಂಡಿದೆ. ಇಂಧನ ಬೆಲೆ ಸಾಗಣೆ ಸೇರಿದಂತೆ ಎಲ್ಲ ಕ್ಷೇತ್ರಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದರಿಂದ ದಿನನಿತ್ಯದ ಸರಕುಗಳ ಬೆಲೆಯಲ್ಲಿ ನಿರಂತರ ಹೆಚ್ಚಳವಾಗುತ್ತಿದೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದ ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ ಈಗಾಗಲೇ ನೂರು […]

ನೂತನ ಭೂಮಿ ನಿಯಂತ್ರಣ: ಲಕ್ಷದ್ವೀಪದಲ್ಲಿ ಭುಗಿಲೆದ್ದ ಆಕ್ರೋಶ

ಹಚ್ಚ ಹಸಿರು ವಾತಾವರಣವಿರುವ ಲಕ್ಷದ್ವೀಪದಲ್ಲಿ ಇತ್ತೀಚೆಗೆ ಜಾರಿಗೊಳಿಸಿರುವ ನೂತನ ಭೂಮಿ ನಿಯಂತ್ರಣ ನಿಯಮಗಳು ಜನರ ಆಕ್ರೋಶಕ್ಕೆ ಕಾರಣವಾಗಿವೆ. ಭಾರತ ಸೇರಿದಂತೆ ಎಲ್ಲೆಡೆಯಿಂದ ದ್ವೀಪಕ್ಕೆ ಆಗಮಿಸುವವರ ಮೇಲೆ ಕಡ್ಡಾಯ ಕ್ವಾರಂಟೈನ್ ಈ ಮೊದಲು ಜಾರಿಯಲ್ಲಿತ್ತು. ಆದರೆ, ನೂತನವಾಘಿ ನೇಮಕಗೊಂಡ ಆಡಳಿತಗಾರ ಪ್ರಫುಲ್ ಖೋಡಾ ಪಟೇಲ್ ಈ ನಿಯಮವನ್ನು ತೆಗೆದುಹಾಕಿದ್ದರಿಂದ, ಒಂದೇ ಒಂದು ಕೋವಿಡ್ ಪ್ರಕರಣಗಳು ಇಲ್ಲದಿದ್ದ ದ್ವೀಪದಲ್ಲಿ ಮೇ 24ರಂದು 6,847 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ, ಜನವಸತಿ ಇರುವ ದ್ವೀಪಗಳಲ್ಲಿ ಎರಡು ತಿಂಗಳು ಲಾಕ್‍ಡೌನ್ ಘೋಷಿಸಲಾಗಿದೆ. ಇದನ್ನು […]

Back To Top