60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ವಿತರಣೆಗೆ ನೋಂದಣಿಯಾಗುವುದು ಹೇಗೆ? ಇಲ್ಲಿದೆ ಸಂಪೂರ್ಣ ಪ್ರಕ್ರಿಯೆಯ ಮಾಹಿತಿ
ನವದೆಹಲಿ: ಮಾರಕ ಕೊರೋನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ ಕೋವಿಡ್ ಲಸಿಕೆ ವಿತರಣಾ ಕಾರ್ಯಾಕ್ರಮದ ಮುಂದಿನ ಹಂತ ಇಂದಿನಿಂದ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ವಿತರಣೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ನೋಂದಣಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ಲಸಿಕೆ ಅಭಿಯಾನದ ಮುಂದಿನ ಹಂತದಲ್ಲಿ 60 ವರ್ಷ ದಾಟಿದವರು ಮತ್ತು 2022ರ ಜನವರಿ 1ಕ್ಕೆ 60 ವರ್ಷ ತುಂಬುವವರು ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳಲು ಅರ್ಹರಾಗಿದ್ದಾರೆ. ಬೇರೆ ರೋಗಗಳನ್ನು ಹೊಂದಿರುವ, 2022ರ ಜನವರಿ 1ಕ್ಕೆ […]




