ಹಕ್ಕಿ ಜ್ವರ: ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ
ಕೇರಳದಲ್ಲಿ ಹಕ್ಕಿಜ್ವರ ಪತ್ತೆಯಾಗಿರುವುದರಿಂದ ಗಡಿ ಜಿಲ್ಲೆಗಳಲ್ಲಿ ಎಚ್ಚರ ವಹಿಸುವಂತೆ ಮೈಸೂರು, ಚಾಮರಾಜನಗರ, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪಶುಸಂಗೋಪನೆ ಇಲಾಖೆ ನಿರ್ದೇಶನ ನೀಡಿದೆ. ರಾಜ್ಯಕ್ಕೆ ಹಕ್ಕಿ ಜ್ವರ ಕಾಲಿಟ್ಟಿಲ್ಲ. ಆದರೆ, ಕೇರಳದ ಕೊಟ್ಟಾಯಂನಲ್ಲಿ ಕಾಣಿಸಿಕೊಂಡಿರುವುದರಿದ ಗಡಿಗಳಲ್ಲಿರುವ ಚೆಕ್‌ಪೋಸ್ಟ್ಗಳಲ್ಲಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯ ನಿರ್ದೇಶಕ ಡಾ. ಬಿ.ಎನ್. ಶಿವರಾಂ ತಿಳಿಸಿದರು. ನಾಲ್ಕು ರಾಜ್ಯಗಳಲ್ಲಿ ಹಕ್ಕಿ ಜ್ವರ: ಕೇರಳ, […]




