ಹವಾಮಾನ ವಿಪರ್ಯಾಸ: ಟ್ರ್ಯಾಕ್ಟರ್ ರ‍್ಯಾಲಿ 7ಕ್ಕೆ
ಪ್ರತಿಕೂಲ ಹವಾಮಾನದಿಂದಾಗಿ ರೈತರು ನಡೆಸಲು ಉದ್ದೇಶಿಸಿದ್ದ ಟ್ರ್ಯಾಕ್ಟರ್ ರ‍್ಯಾಲಿಯನ್ನು ಜ.7ಕ್ಕೆ ಮುಂದೂಡಲಾಗಿದೆ. ಪ್ರತಿಭಟನೆ ನಡೆಯುತ್ತಿರುವ ಸ್ಥಳದಿಂದ ಕುಂಡಲಿ–ಮನೇಸರ್–ಪಲ್ವಾಲ್ ಹೆದ್ದಾರಿವರೆಗೆ ಗುರುವಾರ ಟ್ರ‍್ಯಾಕ್ಟರ್ ರ‍್ಯಾಲಿ ನಡೆಸಲಿದ್ದಾರೆ ಎಂದು ರೈತ ಮುಖಂಡರು ಹೇಳಿದ್ದಾರೆ. ದಿಲ್ಲಿಯಲ್ಲಿ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಮಳೆಯಾಗುತ್ತಿದೆ. ಹವಾಮಾನ ವಿಪರ್ಯಾಸದ ಮುನ್ಸೂಚನೆ ಸಿಕ್ಕಿದ್ದರಿಂದ ರ‍್ಯಾಲಿಯನ್ನು ಮುಂದೂಡಲಾಗಿದೆ ಎಂದು ಸ್ವರಾಜ್ ಅಭಿಯಾನದ ಮುಖಂಡ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ರೈತರು ಪುನರುಚ್ಚರಿಸಿದ್ದಾರೆ. ಹರಿಯಾಣದ ಪ್ರತಿ ಮನೆಯಿಂದ ಒಬ್ಬರು, ಪ್ರತಿ […]




