ಜಿಯೊದಿಂದ ಜನವರಿಗೆ ಬಂಪರ್ ಕೊಡುಗೆ
ರಿಲಯನ್ಸ್ ಜಿಯೊ ನೆಟ್‌ವರ್ಕ್‌ನಿಂದ ದೇಶದಲ್ಲಿ ಯಾವುದೇ ನೆಟ್‌ವರ್ಕ್‌ಗಳಿಗೆ ಹೊಸ ವರ್ಷದಿಂದ ಎಲ್ಲ ಕರೆಗಳು ಉಚಿತವಾಗಿ ಲಭ್ಯವಾಗಲಿದೆ ಎಂದು ಜಿಯೊ ಗುರುವಾರ ಪ್ರಕಟಿಸಿದೆ. ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ ನಿರ್ದೇಶನಗಳ ಪ್ರಕಾರದಂತೆ 2021ರ ಜನವರಿ ೧ರಿಂದ ಹೊಸ ಕ್ರಮಗಳನ್ನು ಜಿಯೊ ಅನುಷ್ಠಾನಗೊಳಿಸುತ್ತಿದ್ದು, ಎಲ್ಲ ದೇಶೀಯ ಧ್ವನಿ ಕರೆಗಳ ಮೇಲಿನ ಮೊಬೈಲ್ ನೆಟ್‌ವರ್ಕ್ ಅಂತರ್ ಸಂಪರ್ಕ ಬಳಕೆ ಶುಲ್ಕವನ್ನು ಕೊನೆಗೊಳಿಸಲಾಗುತ್ತಿದೆ. ಐಯುಸಿ ಕ್ರಮಗಳ ಅನುಸಾರ ಜನವರಿ 1ರಿಂದ ಜಿಯೊ ನೆಟ್‌ವರ್ಕ್‌ನಿಂದ ದೇಶದಲ್ಲಿ ಯಾವುದೇ ನೆಟ್‌ವರ್ಕ್ ಮಾಡುವ ವಾಯ್ಸ್ ಕಾಲ್‌ಗಳಿಗೆ ಶುಲ್ಕ ಇರುವುದಿಲ್ಲ. […]




