ಕೃಷಿ ಕಾಯಿದೆ: ಸುಪ್ರೀಂ ಅಂಗಳಕ್ಕೆ
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಭಾರತೀಯ ಕಿಸಾನ್ ಯೂನಿಯನ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಆರ್‌ಜೆಡಿ ಸಂಸದ ಮನೋಜ್ ಝಾ, ಡಿಎಂಕೆ ಸಂಸದ ತಿರುಚ್ಚಿ ಶಿವ ಹಾಗೂ ಛತ್ತೀಸಗಡದ ರಾಕೇಶ್ ವೈಷ್ಣವ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ಪೀಠ ಕೇಂದ್ರಕ್ಕೆ ನೋಟಿಸ್ ನೀಡಿತ್ತು. ಅರ್ಜಿಯಲ್ಲಿ ತನ್ನನ್ನೂ ಕಕ್ಷಿದಾರನನ್ನಾಗಿ ಪರಿಗಣಿಸಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ (ಭಾನು ಬಣ) ಅಧ್ಯಕ್ಷ […]




