ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯ
ಕನ್ನಡ ಕಾಯಕ ವರ್ಷ ಆಚರಣೆ ಅಂಗವಾಗಿ ರಾಜ್ಯ ಸರ್ಕಾರದ ಎಲ್ಲ ಇಲಾಖೆ-ಸಂಸ್ಥೆಗಳು ಸಂಪೂರ್ಣವಾಗಿ ಕನ್ನಡದಲ್ಲೇ ಕಡತ ನಿರ್ವಹಣೆ ಮಾಡಬೇಕು ಎಂದು ಸರ್ಕಾರ ಆದೇಶಿಸಿದೆ. ಆಡಳಿತಕ್ಕೆ ಸಂಬಂಧಿಸಿದ ಎಲ್ಲ ವಿಚಾರಗಳೂ ಕನ್ನಡದಲ್ಲೇ ಲಭ್ಯವಾಗಬೇಕು. ತಂತ್ರಜ್ಞಾನದಲ್ಲಿ ಕನ್ನಡವನ್ನು ಸಮರ್ಪಕವಾಗಿ ಬಳಸಬೇಕು. ಇಲಾಖೆಗಳ ನೀತಿಗಳ ಅಂತಿಮ ಪ್ರತಿಗಳನ್ನು ಕನ್ನಡದಲ್ಲೂ ಪ್ರಕಟಿಸಬೇಕು. ಇ-ಆಡಳಿತದಲ್ಲಿ ಕನ್ನಡದಲ್ಲೇ ಎಸ್‌ಎಂಎಸ್ ಮತ್ತು ಇ–ಮೇಲ್‌ಗಳನ್ನು ಕಳುಹಿಸಲು ವ್ಯವಸ್ಥೆ ಮಾಡಬೇಕು. ಖಜಾನೆ, ಮಾನವ ಸಂಪನ್ಮೂಲ ನಿರ್ವಹಣೆ, ಟೆಂಡರ್ ತಂತ್ರಾಂಶಗಳು ಮತ್ತು ಸರ್ಕಾರಿ ಆ್ಯಪ್‌ಗಳನ್ನು ಕನ್ನಡದಲ್ಲೂ ಸಿದ್ಧಪಡಿಸಿ, ಬಳಕೆಗೆ ಒದಗಿಸಬೇಕು ಎಂದು […]




